ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷ ಸೇವಿಸಿ ದಂಪತಿ ಆತ್ಮಹತ್ಯೆಗೆ ಯತ್ನ

Last Updated 28 ಸೆಪ್ಟೆಂಬರ್ 2022, 15:51 IST
ಅಕ್ಷರ ಗಾತ್ರ

ತುಮಕೂರು: ದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಧುಗಿರಿ ತಾಲ್ಲೂಕಿನ ಮಲ್ಲನಾಯಕನಹಳ್ಳಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಮಲ್ಲನಾಯಕನಹಳ್ಳಿ ಗ್ರಾಮದ ಬೆಳ್ಳಿನರಸಿಂಹಯ್ಯ (65) ಮತ್ತು ಹನುಮಕ್ಕ (55) ಅವರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಳಿಗ್ಗೆ ಕೆಲಸಕ್ಕೆಂದು ತೆರಳಿದ್ದ ಸಮಯದಲ್ಲಿ ಸಜ್ಜಿಗೇನಹಳ್ಳಿ ಬಳಿ ವಿಷ ಸೇವಿಸಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT