ಬುಧವಾರ, ಫೆಬ್ರವರಿ 19, 2020
17 °C

ಶ್ರೀಗಂಧ ಮರ ಅಕ್ರಮ ಮಾರಾಟ; 5 ವರ್ಷ ಶಿಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಶ್ರೀಗಂಧ ಮರಗಳನ್ನು ಅಕ್ರಮವಾಗಿ ಕಡಿದು ಸ್ವಾಧೀನ ಪಡಿಸಿಕೊಂಡಿದ್ದ ಆರೋಪದ ಮೇಲೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಲಕ್ಷ್ಮಿ ಎಂಬುವವರಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರಾಜೇಂದ್ರ ಬಾದಾಮಿಕರ್ 5 ವರ್ಷ ಕಠಿಣ ಶಿಕ್ಷೆ ಹಾಗೂ ₹50 ಸಾವಿರ  ದಂಡ ವಿಧಿಸಿದ್ದಾರೆ.

ಪ್ರಕರಣದ ಹಿನ್ನೆಲೆ: ಆರೋಪಿಯು ಗುಬ್ಬಿ ಅರಣ್ಯ ವಲಯ ವ್ಯಾಪ್ತಿಯ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯದ ಹಂಡನಹಳ್ಳಿ ಗುಡ್ಡದ ತಪ್ಪಲಿನಲ್ಲಿ 17 ಶ್ರೀಗಂಧದ ಮರಗಳನ್ನು ಅಕ್ರಮವಾಗಿ ಕಡಿದಿದ್ದರು. ದೊಡ್ಡಗುಣಿ ಉಪವಲಯ ಅರಣ್ಯಾಧಿಕಾರಿ ಬಸವರಾಜು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಲಕ್ಷ್ಮಿ ಬಳಿ ಶ್ರೀಗಂಧದ ಮರಗಳಿರುವುದು ಸಾಬೀತಾಗಿತ್ತು.

ಅರಣ್ಯ ಅಧಿಕಾರಿ ಆರ್.ರಮೇಶ್ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಅಭಿಯೋಜಕಿ ಕೆ.ಹೆಚ್.ಶ್ರೀಮತಿ ವಾದ ಮಂಡಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು