ಶನಿವಾರ, ಅಕ್ಟೋಬರ್ 19, 2019
28 °C

ಪತ್ನಿಗೆ ಹಿಂಸೆ ನೀಡುತ್ತಿದ್ದ ಪತಿಗೆ 4 ಶಿಕ್ಷೆ

Published:
Updated:

ಮಧುಗಿರಿ: ಪತ್ನಿಗೆ ಹಣ ತರುವಂತೆ ಮಾನಸಿಕ ಹಿಂಸೆ ನೀಡುತ್ತಿದ್ದ ಪತಿಗೆ 4ನೇ ಹೆಚ್ಚುವರಿ ಮತ್ತು ಸೆಷನ್ಸ್‌ ನ್ಯಾಯಾಲಯ 4 ವರ್ಷ ಕಠಿಣ ಶಿಕ್ಷೆ ಹಾಗೂ ₹ 15 ಸಾವಿರ ದಂಡ ವಿಧಿಸಿ ಗುರುವಾರ ಆದೇಶ ನೀಡಿದೆ.

ಪಾವಗಡ ಪೊಲೀಸ್ ಠಾಣೆ ವ್ಯಾಪ್ತಿಯ ವೆಂಕಟಾಪುರ ಗ್ರಾಮದ ನಿವಾಸಿ ನರಸಿಂಹಮೂರ್ತಿ ದುಶ್ಚಟಗಳಿಗೆ ಬಲಿಯಾಗಿ ತನ್ನ ಪತ್ನಿ ಶಾಂತಮ್ಮಗೆ ತವರು ಮನೆಯಿಂದ ಹಣ ತರುವಂತೆ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದ. ಹಿಂಸೆ ತಾಳಲಾರದೆ 2017ರಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಪಾವಗಡ ಪೊಲೀಸ್ ಠಾಣೆಯ ಪಿಎಸ್ಐ ಎಚ್.ಎಸ್.ಮಂಜುನಾಥ್ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷರೋಪಣ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶ ಪಾಟೀಲ್ ಮಹ್ಮದ್ ಗೌಸ್ ಮೋಹದ್ದೀನ್ ಆರೋಪಿ ನರಸಿಂಹಮೂರ್ತಿಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 15 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಆರ್.ಟಿ.ಅರುಣ ವಾದ ಮಂಡಿಸಿದ್ದರು.

Post Comments (+)