ಗುರುವಾರ , ಜೂನ್ 24, 2021
29 °C

ಲಾಕ್‌ಡೌನ್‌: ವಾಹನ ತಪಾಸಣೆ; ಅನಗತ್ಯ ಓಡಾಟಕ್ಕೆ ಕಡಿವಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದಲ್ಲಿ ಸೋಮವಾರ ಬೆಳಿಗ್ಗೆ ಪೊಲೀಸರು ವಾಹನಗಳ ತಪಾಸಣೆ ನಡೆಸಿ, ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಿದರು. ಸಕಾರಣವಿಲ್ಲದೆ ಸಂಚರಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಂಡರು.

ನಗರ ಪ್ರವೇಶಿಸುವ ಹಾಗೂ ನಗರದಿಂದ ಹೊರಗೆ ಹೋಗುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಂತರ ಜಿಲ್ಲೆಗಳನ್ನು ಸಂಪರ್ಕಿಸುವ ಸ್ಥಳಗಳಲ್ಲಿ ಬ್ಯಾರಿಕೇಡ್‌ಗಳನ್ನು ನಿರ್ಮಿಸಿದ್ದು, ಹೊರ ಜಿಲ್ಲೆಯ ವಾಹನಗಳು ಜಿಲ್ಲೆ ಪ್ರವೇಶಿಸದಂತೆ ತಡೆಯಲಾಗುತ್ತಿದೆ. ಜಿಲ್ಲೆಯಿಂದಲೂ ಹೊರಕ್ಕೆ ಹೋಗಲು ಬಿಡುತ್ತಿಲ್ಲ. ಅಗತ್ಯ ಸೇವೆ ಒದಗಿಸುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುತ್ತಿದೆ.

ಹಿಂದಿನ ದಿನಗಳಿಗೆ ಹೋಲಿಸಿದರೆ ಸೋಮವಾರ ವಾಹನ ಹಾಗೂ ಜನ ಸಂಚಾರ ಸಾಕಷ್ಟು ಪ್ರಮಾಣದಲ್ಲಿ ಕಡಿಮೆ ಇತ್ತು. ಪೊಲೀಸರು ಬೆಳಿಗ್ಗೆಯಿಂದಲೇ ಕಟ್ಟುನಿಟ್ಟು ತಪಾಸಣೆ ಮಾಡುತ್ತಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು