ಸೋಮವಾರ, ಜೂನ್ 21, 2021
30 °C
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆರೋಪ

ಕೋವಿಡ್– 19 ನಿರ್ವಹಣೆ ಸಮರ್ಪಕವಾಗಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ಕೋವಿಡ್–19 ನಿರ್ವಹಣೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ ಎಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಆರೋಪಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ಕೇರ್ ಸೆಂಟರ್‌ ಹಾಗೂ ಆಸ್ಪತ್ರೆಗಳಲ್ಲಿ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡದೆ ಇರುವುದರಿಂದ ಜನರಿಗೆ ಸಾಕಷ್ಟು ತೊಂದರೆಯಾಗುತ್ತಿದೆ. ಬೇರೆ ಬೇರೆ ಖಾಯಿಲೆಗಳಿಂದ ಮೃತಪಟ್ಟಿದ್ದರೂ ಕೋವಿಡ್–19ನಿಂದಲೇ ಮೃತಪಟ್ಟಿದ್ದಾರೆ ಎಂದು ಬಿಂಬಿಸುವುದು ಜನರಲ್ಲಿ ಆತಂಕ ಮೂಡುತ್ತಿದೆ ಎಂದರು.

ಕೋವಿಡ್ ಬಗ್ಗೆ ಜನಗಳಲ್ಲಿರುವ ಗೊಂದಲಗಳನ್ನು ಸರ್ಕಾರ ನಿವಾರಣೆ ಮಾಡಬೇಕು ಎಂದು ತಿಳಿಸಿದರು.

‘ಮಧುಗಿರಿ- ತುಮಕೂರು ಕೆಶಿಪ್ ರಸ್ತೆಯಲ್ಲಿ ಸರ್ವೀಸ್ ರಸ್ತೆಗಳನ್ನು ಮಾಡದೇ ಎರಡು ಟೋಲ್‍ಗಳನ್ನು ನಿರ್ಮಿಸಿ ಹಣ ಸಂಗ್ರಹಿಸುತ್ತಿರುವುದರಿಂದ ಜನರಿಗೆ ಹಾಗೂ ವಾಹನ ಸವಾರರಿಗೆ ತೊಂದರೆ ಆಗುತ್ತಿದೆ. ಆದರೂ, ಜನಪ್ರತಿನಿಧಿಗಳು ಮಾತ್ರ ಜಾಣ ಮೌನವಾಗಿದ್ದಾರೆ’ ಎಂದು ತಿಳಿಸಿದರು.

ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಎನ್.ಗಂಗಣ್ಣ, ಪುರಸಭೆ ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ತಿಮ್ಮರಾಯಪ್ಪ, ಲಾಲಾಪೇಟೆ ಮಂಜುನಾಥ್, ಎಂ.ವಿ.ಮಂಜುನಾಥ್ ಆಚಾರ್, ತುಮುಲ್ ಮಾಜಿ ಅಧ್ಯಕ್ಷ ಬಿ.ನಾಗೇಶ್ ಬಾಬು, ಎಪಿಎಂಸಿ ಅಧ್ಯಕ್ಷ ಶ್ರೀನಿವಾಸ್ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.