ಗುರುವಾರ , ಡಿಸೆಂಬರ್ 3, 2020
23 °C

ಕೊರೊನಾ; ಸಕ್ರಿಯ ಪ್ರಕರಣ 980

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ತುತ್ತಾಗಿದ್ದ 980 ಸಕ್ರಿಯ ಪ್ರಕರಣಗಳಿವೆ. ಗುರುವಾರ ಮತ್ತೆ 117 ಮಂದಿಯಲ್ಲಿ ಸೋಂಕು ದೃಢವಾಗಿದೆ. ಅಲ್ಲದೆ ಇಬ್ಬರು ಮೃತಪಟ್ಟಿದ್ದಾರೆ.

ಇಲ್ಲಿಯವರೆಗೂ ಒಟ್ಟು 3,866 ಮಂದಿಗೆ ಸೋಂಕು ತಗುಲಿದ್ದು, 119 ಮಂದಿ ಮೃತಪಟ್ಟಿದ್ದಾರೆ. 2767 ಮಂದಿ ಗುಣಮುಖರಾಗಿದ್ದಾರೆ. ತುಮಕೂರಿನ ಸಪ್ತಗಿರಿ ಬಡಾವಣೆಯ 64 ವರ್ಷ ಪುರುಷ, ಗುಬ್ಬಿ ತಾಲ್ಲೂಕು ಕಡಬ ಗ್ರಾಮದ 59 ವರ್ಷ ಮಹಿಳೆ ಸೋಂಕಿನಿಂದ ಮೃತಪಟ್ಟಿರುವುದನ್ನು ಜಿಲ್ಲಾ ಆರೋಗ್ಯ ಇಲಾಖೆ ಗುರುವಾರ ದೃಢಪಡಿಸಿದೆ.

ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕದಲ್ಲಿದ್ದ 7,096 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ.

 

ತಾಲ್ಲೂಕು;ಇಂದಿನ ಸೋಂಕಿತರು (ಆ.20);ಒಟ್ಟು ಸೋಂಕಿತರು;ಮರಣ

ಚಿ.ನಾ.ಹಳ್ಳಿ;4;182;3

ಗುಬ್ಬಿ;5;230;6

ಕೊರಟಗೆರೆ;0;227;2

ಕುಣಿಗಲ್;2;390;8

ಮಧುಗಿರಿ;10;252;3

ಪಾವಗಡ;14;325;6

ಶಿರಾ;4;272;6

ತಿಪಟೂರು;9;288;6

ತುಮಕೂರು;63;1,480;77

ತುರುವೇಕೆರೆ;6;220;2

ಒಟ್ಟು;117;3,866;119

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು