ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಶತಕದ ಸಾಲಿನಲ್ಲಿ ಸೋಂಕಿತರು

ಮೂರು ದಿನಗಳಿಂದಲೂ ನಿತ್ಯ 100ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢ
Last Updated 27 ಜುಲೈ 2020, 16:24 IST
ಅಕ್ಷರ ಗಾತ್ರ

ತುಮಕೂರು: ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ನಿತ್ಯವೂ 100ಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ದೃಢವಾಗುತ್ತಿದೆ. ಸೋಮವಾರ 132 ಮಂದಿಗೆ ಸೋಂಕು ತಗುಲಿದೆ. ಇಲ್ಲಿಯವರೆಗೂ ಒಂದೇ ದಿನ ವರದಿಯಾದ ಗರಿಷ್ಠ ಪ್ರಕರಣ ಇದಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಒಟ್ಟು ಸಂಖ್ಯೆ 1346ಕ್ಕೆ ಹೆಚ್ಚಿದೆ.

ತುಮಕೂರಿನ ಪಾಕೀರ್ ನಗರ 60 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಜು. 24ರಂದು ಅವರ ಗಂಟಲು ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. 25ರಂದು ಅವರು ಮೃತಪಟ್ಟಿದ್ದರು. ಸೋಮವಾರ ಬಂದ ವರದಿಯಲ್ಲಿ ಅವರಿಗೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕು ತಗುಲಿದ್ದ ಒಟ್ಟು 43 ಮಂದಿ ಸಾವನ್ನಪ್ಪಿದ್ದಾರೆ.

ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 33 ಮಂದಿ ಸೋಮವಾರ ಗುಣಮುಖರಾಗಿ ಬಿಡುಗಡೆಯಾದರು. ಇಲ್ಲಿಯವರೆಗೂ ಒಟ್ಟು 636 ಮಂದಿ ಗುಣಮುಖರಾಗಿದ್ದು 667 ಸಕ್ರಿಯ ಪ್ರಕರಣಗಳು ಇವೆ.

ಸೋಮವಾರ ಸೋಂಕು ದೃಢವಾದವರಲ್ಲಿ 85 ಪುರುಷರು, 47 ಮಹಿಳೆಯರು ಹಾಗೂ ಐದು ವರ್ಷದ ಒಳಗಿನ ಇಬ್ಬರು ಮಕ್ಕಳು, 60 ವರ್ಷ ಮೇಲ್ಪಟ್ಟ 15 ಮಂದಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT