ಶುಕ್ರವಾರ, ಜುಲೈ 1, 2022
23 °C

ಮಕ್ಕಳಿಗೆ ಕೋವಿಡ್ ಸೆಂಟರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಕೋವಿಡ್–19 ಮೂರನೇ ಅಲೆ ಸಮಯದಲ್ಲಿ ಮಕ್ಕಳಿಗೆ ಸೋಂಕು ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು, ಪರಿಣಾಮ ಬೀರುವುದನ್ನು ತಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಪ್ರತಿ ತಾಲ್ಲೂಕಿನಲ್ಲಿ ಮಕ್ಕಳ ಕೋವಿಡ್ ಕೇರ್ ಸೆಂಟರ್ ಸಜ್ಜುಗೊಳಿಸುವ ಕೆಲಸದಲ್ಲಿ ನಿರತವಾಗಿದೆ.

ಎಲ್ಲಾ ತಾಲ್ಲೂಕಿನಲ್ಲಿ ವಾರ್ ರೂಂ ತೆರೆದು ಮಕ್ಕಳ ತಜ್ಞ ವೈದ್ಯರಿಂದ ಅಗತ್ಯ ಸಮಾಲೋಚನೆ ನಡೆಸಿ, ಮಾರ್ಗದರ್ಶನ ನೀಡಲಾಗುವುದು. ಸಾರ್ವಜನಿಕ ಆಸ್ಪತ್ರೆಗಳಲ್ಲಿ ಮಕ್ಕಳ ಕೋವಿಡ್ ವಾರ್ಡ್‍ಗಳನ್ನು ಸಜ್ಜುಗೊಳಿಸಲಾಗುತ್ತಿದೆ ಎಂದು ಇಲಾಖೆ ಉಪನಿರ್ದೇಶಕ ನಟರಾಜ್ ತಿಳಿಸಿದ್ದಾರೆ.

ಆರೋಗ್ಯ ಇಲಾಖೆ ನೆರವಿನೊಂದಿಗೆ 6 ವರ್ಷದ ಒಳಗಿನ ಅಪೌಷ್ಟಿಕ ಮಕ್ಕಳನ್ನು ಗುರುತಿಸಲಾಗುತ್ತಿದೆ. 6ರಿಂದ 16 ವರ್ಷದ ವಿವಿಧ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಗುರುತಿಸಿ ಪಟ್ಟಿ ಮಾಡಲಾಗುತ್ತಿದೆ. ಇಂತಹ ಮಕ್ಕಳಿಗೆ ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಸ್ವಯಂ ಸೇವಕರ ಮೂಲಕ ಪೌಷ್ಟಿಕ ಆರೋಗ್ಯದ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಗತ್ಯ ಇರುವ ಮಕ್ಕಳಿಗೆ ಜಿಲ್ಲಾ ಆಡಳಿತ, ಸಂಘ ಸಂಸ್ಥೆಗಳ ನೆರವಿನಿಂದ ಸೂಕ್ಷ್ಮ ಪೋಷಕಾಂಶ ಹೊಂದಿರುವ ಪೌಷ್ಟಿಕ ಆಹಾರ ನೀಡಲಾಗುತ್ತದೆ. ಮಕ್ಕಳು ಸೇವಿಸಬಹುದಾದ ಆಹಾರ, ಕೊರೊನಾ ಸೋಂಕು ಹರಡದಂತೆ ಮುನ್ನೆ ಚ್ಚರಿಕೆ ಕ್ರಮಗಳ ಬಗ್ಗೆ ಸರಳ ವಾಗಿ ಅರ್ಥ ಮಾಡಿಕೊಳ್ಳುವ ಚಿತ್ರಗಳುಳ್ಳ ಕರಪತ್ರಮುದ್ರಿಸಿ ಮಕ್ಕಳಿರುವ ಮನೆ ಗಳಿಗೆ ನೀಡಲಾಗುವುದು ಎಂದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.