ತುಮಕೂರು: ಜಿಲ್ಲೆಯಲ್ಲಿ ಕೋವಿಡ್–19 ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವುದರ ಜತೆಗೆ ಮಕ್ಕಳಿಗಾಗಿ ಕೋವಿಡ್ ಆರೈಕೆ ಕೇಂದ್ರ ತೆರೆಯುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಸೂಚಿಸಿದರು.

ಮುಂಬರುವ ಕೋವಿಡ್ ಅಲೆ ಎದುರಿಸಲು ಸಜ್ಜಾಗುವ ಸಂಬಂಧ ಮಂಗಳವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಮೂರನೇ ಅಲೆ ಬಂದರೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದ್ದು, ಅದಕ್ಕೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.

ಹೆಣ್ಣು, ಗಂಡು ಮಕ್ಕಳಿಗೆ ಪ್ರತ್ಯೇಕ ಕೋವಿಡ್ ಸೆಂಟರ್ ತೆರೆಯಬೇಕು. 10 ವರ್ಷದ ಒಳಗಿನ ಮಕ್ಕಳ ತಾಯಂದಿರು ಉಳಿದುಕೊಂಡು ಮಕ್ಕಳನ್ನು ನೋಡಿಕೊಳ್ಳಲು ವ್ಯವಸ್ಥೆ ಮಾಡಬೇಕು. ಗರ್ಭಿಣಿಯರು, ಬಾಣಂತಿ, ಹಿರಿಯ ನಾಗರಿಕರಿಗೆ ಯಾವುದೇ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ
ನೀಡಿದರು.

ಪ್ರಸ್ತುತ ಕೊರೊನಾ ಸೋಂಕಿಗೆ ಒಳಗಾಗಿರುವ ಮಕ್ಕಳನ್ನು ಕೋವಿಡ್ ಸೆಂಟರ್ಗೆ ಕರೆತಂದು ಆರೈಕೆ ಮಾಡಬೇಕು. ಈ ಬಗ್ಗೆ ಪಾಲಕರಿಗೂ ಜಾಗೃತಿಮೂಡಿಸಬೇಕು. ಕೋವಿಡ್ ಸೆಂಟರ್ನಲ್ಲಿ ಕೆಲ ದಿನಗಳು ಇದ್ದು ನಂತರ ಮನೆಗಳಿಗೆ ಹೋದರೆ ಮಕ್ಕಳು, ಪೋಷಕರಿಗೂ ಆತ್ಮಸ್ಥೈರ್ಯ ಬರುತ್ತದೆ ಎಂದರು.

ಕ್ರಮದ ಎಚ್ಚರಿಕೆ: ಸಹಾಯವಾಣಿ 1098ಕ್ಕೆ ಕರೆ ಮಾಡಿದರೆ ಸರಿಯಾಗಿ ಸ್ಪಂದಿಸುವುದಿಲ್ಲ. ಕೆಲವೊಮ್ಮೆ ಯಾರೂ ದೂರವಾಣಿ ಕರೆ ಸ್ವೀಕರಿಸುವುದಿಲ್ಲ ಎಂದು ಸಾಕಷ್ಟು ದೂರುಗಳು ಬಂದಿವೆ. ಮುಂದೆ ಈ ರೀತಿ ದೂರಗಳು ಬರದಂತೆ ನೋಡಿಕೊಳ್ಳಬೇಕು. ಕರೆ ಮಾಡಿದವರಿಗೆ ಸರಿಯಾಗಿ ಸ್ಪಂದಿಸಿ ನೆರವು ನೀಡಬೇಕು. ಮತ್ತೆ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು 1098 ಸಿಬ್ಬಂದಿ ಹಾಗೂ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆನೀಡಿದರು.

ಈಗಾಗಲೇ ಕೋವಿಡ್ನಿಂದ ಇದ್ದ ಒಬ್ಬ ಪೋಷಕರು ಅಥವಾ ಇಬ್ಬರೂ ಪೋಷಕರು ಮೃತಪಟ್ಟು ಮಕ್ಕಳು ಅನಾಥವಾಗಿದ್ದರೆ ತಕ್ಷಣ ಅಧಿಕಾರಿಗಳು ಸ್ಪಂದಿಸಬೇಕು. ಸರ್ಕಾರದ ಹೊಸ ನಿಯಮದಂತೆ ಎಲ್ಲಾ ವ್ಯವಸ್ಥೆಮಾಡಬೇಕು ಎಂದರು. ಈ ಸಂದರ್ಭದಲ್ಲಿ ಅಧಿಕಾರಿಗಳು ನೀಡಿದ ಅಂಕಿ ಸಂಖ್ಯೆಯಲ್ಲಿ ವ್ಯತ್ಯಾಸ ಇರುವುದನ್ನು ಕಂಡು ಅಸಮಾಧಾನ ವ್ಯಕ್ತಪಡಿಸಿದರು. ವ್ಯತ್ಯಾಸವಾಗಿದ್ದರೆ ತಕ್ಷಣವೇ ಸರಿಪಡಿಸಬೇಕು. ಯಾವೊಂದು ಮಗುವೂ ಈ ಸೌಲಭ್ಯದಿಂದ ವಂಚಿತವಾಗಬಾರದು ಎಂದು ಹೇಳಿದರು.

ಕೋವಿಡ್ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ 7,659 ಮಕ್ಕಳಿಗೆ ಸೋಂಕು ತಗುಲಿತ್ತು. ಬುದ್ಧಿಮಾಂದ್ಯ ಮಗು ಸಾವನ್ನಪ್ಪಿದ್ದು ಬಿಟ್ಟರೆ ಯಾವ ಮಕ್ಕಳೂ ಸಾವನ್ನಪ್ಪಿಲ್ಲ ಎಂದು ಡಿಎಚ್ಒ ಡಾ.ನಾಗೇಂದ್ರಪ್ಪ ತಿಳಿಸಿದರು.

ಪೊಲಿಯೋ ಮಾದರಿಯಲ್ಲಿ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಬೇಕು. ಮಕ್ಕಳಿಗೆ ಕಪ್ಪು ಶಿಲೀಂಧ್ರ ಬಂದರೆ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಬೇಕು, ಅಗತ್ಯ ಔಷಧಿ ಲಭ್ಯವಾಗುವಂತೆ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ ಸಲಹೆ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.