ಗುರುವಾರ , ಜೂನ್ 24, 2021
27 °C

ಕೋವಿಡ್ ದೃಢ: ನಿವೃತ್ತ ಉಪತಹಶೀಲ್ದಾರ್ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬೇಲೇನಹಳ್ಳಿ ಬಳಿಯ ತೋಟದಲ್ಲಿ ನಿವೃತ್ತ ಉಪತಹಶೀಲ್ದಾರ್ ಸೋಮ್ಲ ನಾಯ್ಕ್(68) ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಾಹನದೊಳಗೆ ಗುಂಡು ಹಾರಿಸಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

'ತನ್ನಿಂದ ಕುಟುಂಬದವರಿಗೆ ಕೋವಿಡ್ ಹರಡಬಾರದು ಎಂದು ಆತ್ಮಹತ್ಯೆ ಮಾಡಿಕೊಂಡಿದ್ದೇನೆ ಎಂದು ಡೆತ್ ನೋಟ್ ನಲ್ಲಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮ್ಲನಾಯ್ಕ್ ‌ಅವರು ಇದೇ 7ರಂದು ಕೋವಿಡ್ ಪರೀಕ್ಷೆಗೆ ಮಾದರಿ ನೀಡಿದ್ದರು. 9ರಂದು ವರದಿ ಬಂದಿತ್ತು, ಅವರಿಗೆ ಕೋವಿಡ್ ದೃಢಪಟ್ಟಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು