ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಕೋವಿಡ್: ಕಾರ್ಬಿವ್ಯಾಕ್ಸ್ ಲಸಿಕೆ ಲಭ್ಯ

Published 4 ಜನವರಿ 2024, 6:04 IST
Last Updated 4 ಜನವರಿ 2024, 6:04 IST
ಅಕ್ಷರ ಗಾತ್ರ

ತುಮಕೂರು: ಕೋವಿಡ್ ಸೋಂಕು ನಿಯಂತ್ರಿಸಲು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಾರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಕೋವಿಡ್ ಲಸಿಕೆಯ ಮುನ್ನೆಚ್ಚರಿಕೆ ಡೋಸ್ ಪಡೆದುಕೊಳ್ಳದ 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕ ಶಕ್ತಿ ತಗ್ಗಿದವರಿಗೆ, ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲು ಆದ್ಯತೆ ಕೊಡಲಾಗುತ್ತದೆ. ಜಿಲ್ಲೆಗೆ 1,300 ವಯಲ್ ಕಾರ್ಬಿವ್ಯಾಕ್ಸ್ ಲಸಿಕೆ ಸರಬರಾಜಾಗಿದೆ. ಸಾರ್ವಜನಿಕ ಆಸ್ಪತ್ರೆಗಳಲ್ಲಿ ತಲಾ 100 ವಯಲ್, ಜಿಲ್ಲಾ ಆಸ್ಪತ್ರೆಯಲ್ಲಿ 200 ವಯಲ್ ಲಸಿಕೆ ಲಭ್ಯ ಇದೆ.

ಕಾರ್ಬಿವ್ಯಾಕ್ಸ್ ಲಸಿಕೆಯನ್ನು ಮುನ್ನೆಚ್ಚರಿಕೆಯಾಗಿ ನೀಡಲಾಗುತ್ತದೆ. ಕೋವಿಶೀಲ್ಡ್ ಅಥವಾ ಕೋವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಪಡೆದು 6 ತಿಂಗಳು ಅಥವಾ 26 ವಾರಗಳನ್ನು ಪೂರೈಸಿದ 18 ವರ್ಷ ಮೇಲ್ಪಟ್ಟವರು ಮುನ್ನೆಚ್ಚರಿಕೆಯಾಗಿ ಲಸಿಕೆ ಪಡೆದುಕೊಳ್ಳಬಹುದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT