ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಖರ್ಚು: ಗ್ರಾ.ಪಂ ಹೊಣೆ

ಕೊರಟಗೆರೆ ತಾಲ್ಲೂಕು ಆಡಳಿತದ ವಿರುದ್ಧ ಗ್ರಾಮ ಪಂಚಾಯಿತಿ ಅಧಿಕಾರಿಗಳ ಆರೋಪ
Last Updated 8 ಜುಲೈ 2020, 9:24 IST
ಅಕ್ಷರ ಗಾತ್ರ

ಕೊರಟಗೆರೆ: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ನಿರ್ವಹಣಾ ವೆಚ್ಚವನ್ನು ತಾಲ್ಲೂಕು ಆಡಳಿತ ಭರಿಸುತ್ತಿಲ್ಲ ಎಂದು ತಾಲ್ಲೂಕಿನ ಕೆಲ ಗ್ರಾಮ ಪಂಚಾಯಿತಿ ಅಧಿಕಾರಿಗಳು ದೂರಿದ್ದಾರೆ.

ತಾಲ್ಲೂಕಿನ ರೆಡ್ಡಿಕಟ್ಟೆಬಾರೆ ಮುರಾರ್ಜಿ ವಸತಿ ಶಾಲೆ, ಹುಲಿಕುಂಟೆ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ, ಬಜ್ಜನಹಳ್ಳಿ ಏಕಲವ್ಯ ವಸತಿ ಶಾಲೆಗಳಲ್ಲಿ ಕೋವಿಡ್ ಚಿಕಿತ್ಸಾ ಕೇಂದ್ರ ತೆರೆಯಲಾಗಿದೆ. ಇಲ್ಲಿನ ಮೂಲ ಸೌಕರ್ಯ ನಿರ್ವಹಣಾ ವೆಚ್ಚವನ್ನು ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಆಡಳಿತ ಭರಿಸಲಿದೆ.

ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿರುವವರ ನಿರ್ವಹಣಾ ಖರ್ಚು, ವೆಚ್ಚಗಳನ್ನು ಸ್ಥಳೀಯ ಗ್ರಾಮ ಪಂಚಾಯಿತಿಗಳೇ ಭರಿಸುವಂತೆ ಒತ್ತಡ ಹೇರಲಾಗುತ್ತಿದೆ. ಈಗಾಗಲೇ ಲಾಕ್‌ಡೌನ್‌ ಸಂದರ್ಭದಲ್ಲಿ ಗಡಿಭಾಗದಲ್ಲಿನ ಚೆಕ್‌ಪೋಸ್ಟ್‌ ನಿರ್ವಹಣೆ ವೆಚ್ಚವನ್ನು ಗ್ರಾಮ ಪಂಚಾಯಿತಿಗಳಿಂದ ಭರಿಸಲಾಗಿದೆ. ಕ್ವಾರಂಟೈನ್‌ನಲ್ಲಿರುವವರ ಊಟ, ತಿಂಡಿ ಇತರೆ ಖರ್ಚುಗಳನ್ನು ಗ್ರಾಮ ಪಂಚಾಯಿತಿಯೇ ಭರಿಸಬೇಕು ಎಂದು ತಾಲ್ಲೂಕು ಆಡಳಿತ ಒತ್ತಡ ಹಾಕುತ್ತಿದೆ ಎಂದು ಗ್ರಾ.ಪಂ ಕಾರ್ಯದರ್ಶಿಯೊಬ್ಬರು ತಿಳಿಸಿದರು.

ಗ್ರಾಮ ಪಂಚಾಯಿತಿಯಲ್ಲಿ ಲಾಕ್‌ಡೌನ್ ಆದಾಗಿನಿಂದ ಯಾವುದೇ ಕಂದಾಯ ವಸೂಲಿಯಾಗುತ್ತಿಲ್ಲ. ಹಾಗಾಗಿ ಗ್ರಾ.ಪಂ.ಗಳಲ್ಲಿ ಹಣವಿಲ್ಲ. ಆದರೂ ಕೆಲವು ಪಂಚಾಯಿತಿ ಅಧಿಕಾರಿಗಳು ತಮ್ಮ ಜೇಬಿನಿಂದ ಖರ್ಚು ಮಾಡುತ್ತಿದ್ದಾರೆ. ಲಾಕ್‌ಡೌನ್ ನಂತರ ಈವರೆಗೆ ಕೊರೊನಾ ಹಿನ್ನೆಲೆಯಲ್ಲಿ ಮಾಡಿದ ಖರ್ಚುಗಳಿಗೆ ತಾಲ್ಲೂಕು ಆಡಳಿತ ಹಣ ನೀಡಿಲ್ಲ. ಜಿಲ್ಲೆಯ ಬೇರೆ ತಾಲ್ಲೂಕುಗಳಲ್ಲಿ ಗ್ರಾ.ಪಂ.ಗಳಿಗೆ ತಾಲ್ಲೂಕು ಆಡಳಿತವೇ ಹಣ ಭರಿಸುತ್ತಿದೆ. ಕೊರಟಗೆರೆಯಲ್ಲಿ ಮಾತ್ರ ಭಿನ್ನವಾಗಿದೆ ಎಂದು ಅಧಿಕಾರಿಗಳು ದೂರುತ್ತಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT