ಶುಕ್ರವಾರ, ಆಗಸ್ಟ್ 19, 2022
25 °C
192 ಮಂದಿಗೆ ಸೋಂಕು, ನಾಲ್ಕು ಮಂದಿ ಸಾವು

ತುಮಕೂರು: 174 ಮಂದಿ ಕೊರೊನಾ ಸೋಂಕಿತರು ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯಲ್ಲಿ ಮಂಗಳವಾರ 192 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ನಾಲ್ಕು ಮಂದಿ ಪುರುಷರು ಮೃತಪಟ್ಟಿದ್ದಾರೆ. 174 ಮಂದಿ ಸೋಂಕಿತರು ಗುಣಮುಖರಾಗಿ ಮನೆಗಳಿಗೆ ಹಿಂದಿರುಗಿದ್ದಾರೆ.

ನಗರದ ಪಿ.ಎಚ್.ಕಾಲೊನಿ 65 ವರ್ಷದ ವ್ಯಕ್ತಿ, ಪಾವಗಡ 85 ವರ್ಷದ ವೃದ್ಧ, ತಿಪಟೂರು 70 ವರ್ಷದ ವೃದ್ಧ, ಕುಣಿಗಲ್ ತಾಲ್ಲೂಕು ಕೆ.ಆರ್.ಎಸ್ ಅಗ್ರಹಾರದ 60 ವರ್ಷದ ವ್ಯಕ್ತಿ ಮೃತಪಟ್ಟವರು. ಒಟ್ಟಾರೆ ಮೃತಪಟ್ಟವರ ಸಂಖ್ಯೆ 162ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ 6,148 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈಗಾಗಲೇ 4,375 ಮಂದಿ ಗುಣಮುಖರಾಗಿದ್ದಾರೆ. ಪ್ರಸ್ತುತ 1,604 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಸೋಂಕು ದೃಢಪಟ್ಟವರಲ್ಲಿ 105 ಮಂದಿ ಪುರುಷರು, 87 ಮಂದಿ ಮಹಿಳೆಯರು, 5 ವರ್ಷದೊಳಗಿನ 9 ಮಕ್ಕಳು, 60 ವರ್ಷ ಮೇಲ್ಪಟ್ಟ 32 ಮಂದಿ ಇದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು