ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ: 401ಕ್ಕೆ ತಲುಪಿದ ಸಾವಿನ ಸಂಖ್ಯೆ

Last Updated 27 ಅಕ್ಟೋಬರ್ 2020, 3:46 IST
ಅಕ್ಷರ ಗಾತ್ರ

ತುಮಕೂರು: ಕೊರೊನಾ ಸೋಂಕಿನಿಂದ ಸೋಮವಾರ ಕೊರಟಗೆರೆ ಪಟ್ಟಣದ 60 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 401ಕ್ಕೆ ತಲುಪಿದೆ.

ಸೋಮವಾರ 104 ಮಂದಿಯಲ್ಲಿ ಸೋಂಕು ದೃಢವಾಗಿದೆ. ತುಮಕೂರು ತಾಲ್ಲೂಕಿನ 35, ಚಿಕ್ಕನಾಯನಹಳ್ಳಿ 4, ಗುಬ್ಬಿ 8, ಕೊರಟಗೆರೆ 22, ಕುಣಿಗಲ್ 6, ಮಧುಗಿರಿ 4, ಪಾವಗಡ 8, ಶಿರಾ 4, ತಿಪಟೂರು 1 ಮತ್ತು ತುರುವೇಕೆರೆ ತಾಲ್ಲೂಕಿನ 12 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡಿದೆ. ಇವರಲ್ಲಿ 63 ಪುರುಷರು ಹಾಗೂ 41 ಮಹಿಳೆಯರು ಇದ್ದಾರೆ.

ಜಿಲ್ಲಾ ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 178 ಮಂದಿ ಗುಣಮುಖರಾಗಿ ಮನೆಗಳಿಗೆ ತೆರಳಿದರು. ಇಲ್ಲಿಯವರೆಗೂ ಜಿಲ್ಲೆಯಲ್ಲಿ ಒಟ್ಟು 19,370 ಮಂದಿಗೆ ಸೋಂಕು ತಗುಲಿದ್ದು 17,576 ಮಂದಿ ಗುಣಮುಖರಾಗಿದ್ದಾರೆ. 1,392 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT