ಬುಧವಾರ, ಏಪ್ರಿಲ್ 1, 2020
19 °C

ಪ್ರತ್ಯೇಕ ಮಧುಗಿರಿ ಜಿಲ್ಲೆ ರೂಪಿಸಲು ವಿಧಾನಸಭೆಯಲ್ಲಿ ಒತ್ತಾಯ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ತುಮಕೂರು ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ಮಧುಗಿರಿ ಜಿಲ್ಲೆ ರೂಪಿಸಲು ಸರ್ಕಾರ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಎಂದು ಶಾಸಕ ವೀರಭದ್ರಯ್ಯ ಆಗ್ರಹಿಸಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ತುಮಕೂರು ಜಿಲ್ಲೆ ದೊಡ್ಡದಾಗಿದೆ. ಅದನ್ನು ವಿಭಜಿಸಿ ಮಧುಗಿರಿ ಜಿಲ್ಲೆ ರೂಪಿಸಿದರೆ ಆಡಳಿತ ಮತ್ತು ಅಭಿವೃದ್ಧಿ ಚಟುವಟಿಕೆಗಳ ನಿರ್ವಹಣೆಗೆ ಅನುಕೂಲವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

ಈ ಹಿಂದೆ ರಾಜ್ಯದ ಹಲವು ದೊಡ್ಡ ಜಿಲ್ಲೆಗಳನ್ನು ವಿಭಜಿಸಿ ಸಣ್ಣ ಜಿಲ್ಲೆಗಳನ್ನು ರೂಪಿಸಿದ್ದನ್ನು ಉಲ್ಲೇಖಿಸಿದ ಅವರು, ಮಧುಗಿರಿ ಭಾಗದ ಜನರು ಹಲವು ವರ್ಷಗಳಿಂದ ಈ ಬೇಡಿಕೆ ಮುಂದಿಟ್ಟಿದ್ದಾರೆ. ಸರ್ಕಾರ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು