ಶುಕ್ರವಾರ, ಜೂನ್ 18, 2021
28 °C

ಶಾಸಕ ಬಿ.ಸತ್ಯನಾರಾಯಣ ಪಂಚಭೂತಗಳಲ್ಲಿ ಲೀನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ: ಜೆಡಿಎಸ್ ಮುಖಂಡ ಹಾಗೂ ಶಾಸಕ ಬಿ.ಸತ್ಯನಾರಾಯಣ ಅಂತ್ಯಕ್ರಿಯೆ ಬುಧವಾರ ಸಂಜೆ ತಾಲ್ಲೂಕಿನ ಭುವನಹಳ್ಳಿ ಗ್ರಾಮದಲ್ಲಿರುವ ಅವರ ತೋಟದಲ್ಲಿ ನಡೆಯಿತು.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ಅನಾರೋಗ್ಯದಿಂದ ನಿಧನರಾದ ಸತ್ಯನಾರಾಯಣ ಪಾರ್ಥಿವ ಶರೀರವನ್ನು ಬುಧವಾರ ತುಮಕೂರಿನ ಜೆಡಿಎಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಗಿತ್ತು.

ಅಲ್ಲಿಂದ ಶಿರಾಕ್ಕೆ ತಂದು ಕುಂಚಿಟಿಗರ ಸಂಘದ ಆವರಣದಲ್ಲಿ ಇಟ್ಟು ಗೌರವ ಸಲ್ಲಿಸಲಾಯಿತು. ಎಪಿಎಂಸಿ ಆವರಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಿತ್ತು. ನಂತರ ಭುವನಹಳ್ಳಿ ಗ್ರಾಮದ ಅವರ ತೋಟದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ‌.ಮಾಧುಸ್ವಾಮಿ ಅವರು ಪಾರ್ಥಿವ ಶರೀರದ ಮೇಲೆ ಹೊದಿಸಿದ್ದ ರಾಷ್ಟ್ರ ಧ್ವಜವನ್ನು ಅವರ ಕುಟುಂಬದವರಿಗೆ ನೀಡಿದರು. ಪೊಲೀಸರು ಗೌರವ ರಕ್ಷೆ ನೀಡಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿದರು. ನಂತರ ಪಾರ್ಥಿವ ಶರೀರವನ್ನು ಹಿಂದೂ ಸಂಪ್ರದಾಯದಂತೆ ಮಣ್ಣು ಮಾಡಲಾಯಿತು. ಸತ್ಯನಾರಾಯಣ ಪುತ್ರ ಸತ್ಯಪ್ರಕಾಶ್ ವಿಧಿವಿಧಾನಗಳನ್ನು ಪೂರೈಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.