ಮಂಗಳವಾರ, ಡಿಸೆಂಬರ್ 10, 2019
26 °C

ಬೆಟ್ಟ ಹತ್ತುವಾಗ ಹೃದಯಾಘಾತ; ಶಾಲಾ ಸಿಬ್ಬಂದಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಮಧುಗಿರಿ: ಇಲ್ಲಿನ ಏಕಶಿಲಾ ಬೆಟ್ಟವನ್ನು ಗುರುವಾರ ಬೆಳಿಗ್ಗೆ ಹತ್ತುವಾಗ ಹೃದಯಾಘಾತದಿಂದ ತಿಪ್ಪೇಸ್ವಾಮಿ(28) ಎಂಬುವವರು ಮೃತಪಟ್ಟಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹುಂಚದಕಟ್ಟೆ ಸರ್ಕಾರಿ ಪ್ರೌಢ ಶಾಲೆಯ ದ್ವಿತೀಯ ದರ್ಜೆ ಸಹಾಯಕರಾಗಿದ್ದಾರೆ.

ಶಾಲೆಯ 46 ವಿದ್ಯಾರ್ಥಿಗಳು ಮತ್ತು ನಾಲ್ಕು ಶಿಕ್ಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಇವರು ಗುರುವಾರ ಬೆಳಿಗ್ಗೆ ಮಧುಗಿರಿ ಏಕಶಿಲಾ ಬೆಟ್ಟವನ್ನು ಹತ್ತುತ್ತಿದ್ದರು. ಇದ್ದಕ್ಕಿದ್ದಂತೆಯೇ ಹೃದಯಾಘಾತದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ತಾಲ್ಲೂಕು ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿದರು. ಮಧುಗಿರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)