ಹಲ್ಲೆ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

ಭಾನುವಾರ, ಮೇ 19, 2019
34 °C

ಹಲ್ಲೆ ಪ್ರಕರಣ; ಆರೋಪಿಗೆ 3 ವರ್ಷ ಕಠಿಣ ಶಿಕ್ಷೆ

Published:
Updated:

ತುಮಕೂರು: ಅತ್ತೆ ಹಾಗೂ ಮಾವನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆರೋಪಿ ಕೃಷ್ಣಮೂರ್ತಿ ಎಂಬ ವ್ಯಕ್ತಿಗೆ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ಈಚೆಗೆ ಆದೇಶಿಸಿದೆ.

6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಬಿ.ಎಲ್.ಜಿನರಾಳ್ಕರ್ ಈ ಆದೇಶ ನೀಡಿದ್ದಾರೆ.

ಪ್ರಕರಣ ಹಿನ್ನೆಲೆ:  ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಮಡಕಶಿರಾ ತಾಲ್ಲೂಕು ಅಮರಾಪುರ ಮಂಡಲ್‌ನ ಹನುಮಂತನಹಳ್ಳಿ ಗ್ರಾಮದ ನಿವಾಸಿ ಕೃಷ್ಣಮೂರ್ತಿ. ಈತನ ಮಾವನ ಊರು ಶಿರಾ ತಾಲ್ಲೂಕು ಬೀರನಹಳ್ಳಿ ಗ್ರಾಮ. ಹೆಂಡತಿ ಮತ್ತು ಮಕ್ಕಳನ್ನು ತನ್ನೊಂದಿಗೆ ಕಳುಹಿಸಿಕೊಟ್ಟಿಲ್ಲ ಎಂಬ ಕಾರಣಕ್ಕೆ ಮಾವ ನಿಂಗಣ್ಣ ಮತ್ತು ಅತ್ತೆ ಲಕ್ಷ್ಮಮ್ಮ ಅವರ ಮೇಲೆ 2017ರ ಅಕ್ಟೋಬರ್ 25ರ ರಾತ್ರಿ 1.30ರ ಹೊತ್ತಿಗೆ ಮಾರಣಾಂತಿಕ ಹಲ್ಲೆ ನಡೆಸಿದ್ದ.

ಪಟ್ಟಣಾಯಕನಹಳ್ಳಿ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ಎಂ.ಚಂದ್ರಶೇಖರ್ ತನಿಖೆ ಪೂರೈಸಿ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕಿ ಆರ್.ಟಿ.ಅರುಣ ವಾದ ಮಂಡಿಸಿದ್ದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !