ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಣಿಗಲ್: ತಾಲ್ಲೂಕಿನ ಅಂಚೇಪಾಳ್ಯ ಸೇತುವೆ ಬಳಿ ಏ. 26ರಂದು ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಬೆಂಗಳೂರಿನ ಬನಶಂಕರಿಯ ನಿವಾಸಿ ಹುಚ್ಚೇಗೌಡ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಅಂದು ದ್ವಿಚಕ್ರವಾಹನದಲ್ಲಿ ಪ್ರಯಾಣಿಸುತ್ತಿದ್ದ ಶಿವರಾಜ್ ಮತ್ತು ಹುಚ್ಚೇಗೌಡ ಎಂಬವರಿಗೆ ಕಾರೊಂದು ಡಿಕ್ಕಿಹೊಡೆದಿತ್ತು. ಹಿಂಬದಿ ಕುಳಿತಿದ್ದ ಹುಚ್ಚೇಗೌಡ ಅವರು ತೀವ್ರ ಗಾಯಗೊಂಡು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಅನಾರೋಗ್ಯದಿಂದ ವ್ಯಕ್ತಿಯ ಸಾವು

ತೀವ್ರ ಅನಾರೋಗ್ಯದಿಂದ ಬಳಲಿದ್ದ ತಾಲ್ಲೂಕಿನ ಬೀರಾಗಾನಹಳ್ಳಿಯ ಅನ್ವರ್‌ಪಾಷಾ (42) ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಕುಸಿದು ಮೃತಪಟ್ಟಿದ್ದಾರೆ. ಅವರು ಅಗ್ರಹಾರದಲ್ಲಿ ವಾಸವಿದ್ದರು. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.