ಶನಿವಾರ, ಮಾರ್ಚ್ 28, 2020
19 °C
ಕೊರಟಗೆರೆ ತಾಲ್ಲೂಕು ಕರಕಲ್ಲುಘಟ್ಟ ಗ್ರಾಮ

ಕೊಲೆ ಪ್ರಕರಣ: 25 ವರ್ಷದ ನಂತರ ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೊರಟಗೆರೆ ತಾಲ್ಲೂಕು ಹೊಳವನಹಳ್ಳಿ ಹೋಬಳಿ ಕರಕಲ್ಲುಘಟ್ಟ ಗ್ರಾಮದಲ್ಲಿ ಈರಮಲ್ಲಮ್ಮ ಅವರನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಸಿದ್ದಹನುಮಯ್ಯ ಎಂಬುವವರನ್ನು 25 ವರ್ಷದ ನಂತರ ಪೊಲೀಸರು ಬಂಧಿಸಿದ್ದಾರೆ.

ಸಿದ್ದಹನುಮಯ್ಯ 1994ರಲ್ಲಿ ಜಮೀನಿನಲ್ಲಿ ಕೆಲಸ ಮಾಡುತಿದ್ದ ಈರಮಲ್ಲಮ್ಮ ಅವರ ಮೇಲೆ ಅತ್ಯಾಚಾರ ಎಸಗಿ ಬರ್ಬರವಾಗಿ ಹತ್ಯೆ ಮಾಡಿದ್ದ. ನಂತರ ಊರು ಬಿಟ್ಟಿದ್ದ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇತ್ತೀಚೆಗೆ ನಡೆದ ಮಾಸಿಕ ಅಪರಾಧ ಸಭೆಯಲ್ಲಿ ಆರೋಪಿಯನ್ನು ಶೀಘ್ರವಾಗಿ ಪತ್ತೆ ಮಾಡಲು ಸೂಚಿಸಲಾಗಿತ್ತು. ಕೊರಟಗೆರೆ ಸಬ್‌ ಇನ್‌ಸ್ಪೆಕ್ಟರ್ ಬಿ.ಸಿ.ಮಂಜುನಾಥ್ ಹಾಗೂ ಸಿಬ್ಬಂದಿ ವೆಂಕಟೇಶ್, ದೊಡ್ಡಲಿಂಗಯ್ಯ ನೇತೃತ್ವದ ತಂಡ ರಚಿಸಲಾಗಿತ್ತು. ಈ ತಂಡವು ನೆಲಮಂಗಲ ಬಳಿಯ ಬೆಟ್ಟಹಳ್ಳಿಯಲ್ಲಿ ಆರೋಪಿಯು ಕೂಲಿಕೆಲಸ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿತ್ತು. ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ಮದ್ಯ ಮಾರಾಟ: ಕಳೆದ 1 ವಾರದಲ್ಲಿ ಜಿಲ್ಲೆಯ 52 ಕಡೆಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತುಮಕೂರು ಉಪವಿಭಾಗ 7, ಮಧುಗಿರಿ 11, ಶಿರಾ 11, ತಿಪಟೂರು 15, ಕುಣಿಗಲ್ ತಾಲ್ಲೂಕಿನಲ್ಲಿ 5 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ತುಮಕೂರಿನಲ್ಲಿ 35 ಪುಡಿರೌಡಿಗಳನ್ನು ವಶಕ್ಕೆ ಪಡೆದಿದ್ದು, ಇವರ ಕಿಂಗ್‌ಪಿನ್‌ಗಳ ಪತ್ತೆಗೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಮಧುಗಿರಿ ಡಿವೈಎಸ್‌ಪಿ ಪ್ರವೀಣ್, ಕೊರಟಗೆರೆ ಸಿಪಿಐ ನಧಾಪ್, ಪಿಎಸ್‌ಐ ಬಿ.ಸಿ.ಮಂಜುನಾಥ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು