ಸೋಮವಾರ, ಏಪ್ರಿಲ್ 6, 2020
19 °C

ಕೊಲೆಗೆ ಯತ್ನ: ಆರೋಪಿಗಳ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸೋಮವಾರ (ಫೆ.24) ತಾಲ್ಲೂಕಿನ ಊರುಕೆರೆ ಗ್ರಾಮದ ರಾಜಣ್ಣ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅದೇ ಗ್ರಾಮದ ಓ.ಸಿ ಕೃಷ್ಣಪ್ಪ ಅವರ ಕಾರು ತಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಕೃಷ್ಣಪ್ಪ ಮತ್ತು ಆತನ ಕುಟುಂಬಸ್ಥರು ರಾಜಣ್ಣ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದರು.

ರಾಜಣ್ಣ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಆರೋಪಿಗಳನ್ನು ಪತ್ತೆ ಹಚ್ಚಲು ಸರ್ಕಲ್ ಇನ್‌ಸ್ಪೆಕ್ಟರ್‌ ಟಿ.ಸಿ.ರಾಮಕೃಷ್ಣಯ್ಯ ನೇತೃತ್ವದ ತಂಡ ರಚಿಸಲಾಗಿತ್ತು. ತಂಡವು ಆರೋಪಿಗಳಾದ ಓ.ಸಿ ಕೃಷ್ಣಪ್ಪ, ಎಚ್.ಜಗದೀಶ ಹಾಗೂ ಪುರುಷೋತ್ತಮ್‌ ಎಂಬುವವರನ್ನು ಬಂಧಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)