ಶನಿವಾರ, ಮೇ 30, 2020
27 °C

ತುಮಕೂರು: ನೇಣು ಹಾಕಿಕೊಂಡು ಚಾಲಕ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ನಗರದ ಬಟವಾಡಿ ಸಮೀಪದ ಮೇಲ್ಸೇತುವೆ ಕಂಬಿಗೆ ಲಾರಿ ಚಾಲಕ ಕನಕಪುರ ತಾಲ್ಲೂಕಿನ ಹಾರೋಹಳ್ಳಿ ನಿವಾಸಿ ಎಂ.ಸಿ.ಮಧುಸೂದನ್‌ (30) ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಧುಸೂದನ್‌, ಬೆಂಗಳೂರಿನಿಂದ ಲಾರಿಯಲ್ಲಿ ಸಿಮೆಂಟ್‌ ತುಂಬಿಕೊಂಡು ಬಂದು ಶಿರಾದಲ್ಲಿ ಇಳಿಸಿದ್ದಾರೆ.

ಬೆಂಗಳೂರಿಗೆ ವಾಪಸ್ ಆಗುವಾಗ ಬಟವಾಡಿ ಸಮೀಪ ಲಾರಿ ನಿಲ್ಲಿಸಿ, ಲಾರಿಯಲ್ಲಿದ್ದ ತನ್ನ ಸ್ನೇಹಿತನಿಗೆ ‘ತುಮಕೂರಿನಲ್ಲಿ ಸಂಬಂಧಿಕರಿದ್ದಾರೆ. ನಾನು ಅವರ ಮನೆಗೆ ಹೋಗಿ ಬರುತ್ತೇನೆ. ನೀನು ಲಾರಿ ತೆಗೆದುಕೊಂಡು ಹೋಗು’ ಎಂದು ಹೇಳಿದ್ದಾರೆ. ಯಾವ ಕಾರಣಕ್ಕಾಗಿ ನೇಣು ಹಾಕಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕ್ಯಾತ್ಸಂದ್ರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು