ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆ ನಷ್ಟ: ಪರಿಹಾರ ವಿಫಲ

ಶಾಸಕ ವೆಂಕಟರವಣಪ್ಪ ಅಸಮಾಧಾನ
Last Updated 22 ಜನವರಿ 2022, 4:19 IST
ಅಕ್ಷರ ಗಾತ್ರ

ಪಾವಗಡ: ‘ಅರ್ಹ ರೈತರಿಗೆ ಬೆಳೆ ನಷ್ಟ ಪರಿಹಾರ ಕೊಡಿಸುವಲ್ಲಿ ಕೃಷಿ, ತೋಟಗಾರಿಕೆ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಶಾಸಕ ವೆಂಕಟರವಣಪ್ಪ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿ
ಅವರು ಮಾತನಾಡಿದರು.

‘ತಾಲ್ಲೂಕಿನ ಸಾಕಷ್ಟು ಗ್ರಾಮಗಳ ರೈತರಿಗೆ ಬೆಳೆ ನಷ್ಟ ಪರಿಹಾರ ಸಿಕ್ಕಿಲ್ಲ. ರೈತರಿಗೆ ಮಾಹಿತಿ ನೀಡಿ ಅರ್ಜಿ ಹಾಕಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಕೃಷಿ, ತೋಟಗಾರಿಕೆ ಅಧಿಕಾರಿಗಳು ಈ ಬಗ್ಗೆ ಸಮರ್ಪಕವಾಗಿ ಕಾರ್ಯ ನಿರ್ವಹಿಸಿಲ್ಲ’ ಎಂದರು.

ರೈತರ ಜಮೀನುಗಳಿಗೆ ಭೇಟಿ ನೀಡಿ ಪಟ್ಟಿ ಅಂತಿಮಗೊಳಿಸದೆ ಕಚೇರಿಗೆ ಅಧಿಕಾರಿಗಳು ಸೀಮಿತರಾಗಿದ್ದಾರೆ. ಇದರಿಂದ ಅರ್ಹ ರೈತರಿಗೆ ಅನ್ಯಾಯವಾಗಿದೆ. ಇದೇ ಸ್ಥಿತಿ ಮುಂದುವರೆದರೆ ಅಧಿಕಾರಿಗಳಿಗೆ ಕಷ್ಟವಾಗುತ್ತದೆ ಎಂದರು.

ವೆಂಕಟಾಪುರ ಶಾಲೆಯಲ್ಲಿ ಶಿಕ್ಷಕಿಯೊಬ್ಬರು ಸುಮಾರು 20 ವರ್ಷಗಳಿಂದ ಒಂದೇ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶಾಲಾ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳ ಮೇಲೆ ಇವರು ದೌರ್ಜನ್ಯ ಎಸಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ಕೂಡಲೆ ಅವರನ್ನು ಬೇರೆಡೆಗೆ ನಿಯೋಜಿಸಿ. ತುಮಕೂರು, ಬೆಂಗಳೂರಿನಿಂದ ಶಾಲೆಗೆ ಓಡಾಡುವ, ತಡವಾಗಿ ಆಗಮಿಸುವ ಶಿಕ್ಷಕರ ಮೇಲೆ ಕ್ರಮ ತೆಗೆದುಕೊಳ್ಳಿ ಎಂದು ಬಿಇಒ ಅಶ್ವಥನಾರಾಯಣ ಅವರಿಗೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ನಿಲಯಗಳಿಗೆ ಭೇಟಿ ನೀಡಿ ಅಧಿಕಾರಿಗಳು ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಬೇಕು. ಕೋವಿಡ್ ಸೊಂಕು ಹರಡದಂತೆ ಔಷಧಿ ಸಿಂಪಡನೆ ಮಾಡಬೇಕು
ಎಂದು ಸೂಚಿಸಿದರು.

ಕುರುಬರ ಹಳ್ಳಿ ಗೇಟ್ ಬಳಿಯಿಂದ ಪಟ್ಟಣದ ಶಾಲಾ, ಕಾಲೇಜುಗಳಿಗೆ ಬರುವ ವಿದ್ಯಾರ್ಥಿನಿಯರಿಗೆ ಉಚಿತ ಬಸ್ ಪಾಸ್ ನೀಡಿ, ವಸತಿನಿಲಯದ ಬಳಿ ಬಸ್‌ಗಳನ್ನು ನಿಲ್ಲಿಸುವಂತೆ ಚಾಲಕರಿಗೆ ಸೂಚಿಸಬೇಕು ಎಂದು ಕೆಎಸ್‌ಆರ್‌ಟಿಸಿ ಘಟಕದ ವ್ಯವಸ್ಥಾಪಕ ಹನುಮಂತರಾಯ ಅವರಿಗೆ ಸೂಚಿಸಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ತಾಳೇಮರದಹಳ್ಳಿ ನರಸಿಂಹಯ್ಯ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಶಿವರಾಜಯ್ಯ, ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT