ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕನಾಯ್ಕನಹಳ್ಳಿಗೆ ನೀರು: 26 ಕೆರೆ ತುಂಬಿಸಲು ₹ 98.50 ಕೋಟಿ

Last Updated 4 ಸೆಪ್ಟೆಂಬರ್ 2021, 16:43 IST
ಅಕ್ಷರ ಗಾತ್ರ

ಬೆಂಗಳೂರು: ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಚಿಕ್ಕನಾಯ್ಕನಹಳ್ಳಿಯ 26 ಕೆರೆಗಳಿಗೆ ನೀರು ಹರಿಸುವ ಯೋಜನೆಯಲ್ಲಿ ಬಾಕಿ ಉಳಿದಿರುವ ಕೆಲಸಗಳು ಹಾಗೂ ಹೊಸ ಕಾಮಗಾರಿಗಳನ್ನು ₹ 98.50 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುವ ಜಲ ಸಂಪನ್ಮೂಲ ಇಲಾಖೆಯ ಪ್ರಸ್ತಾವಕ್ಕೆ ಸಚಿವ ಸಂಪುಟ ಸಭೆ ಶನಿವಾರ ಒಪ್ಪಿಗೆ ನೀಡಿದೆ.

‘2012ರಲ್ಲೇ ಈ ಕಾಮಗಾರಿ ಆರಂಭಿಸಲಾಗಿತ್ತು. ಆದರೆ, ಗುತ್ತಿಗೆದಾರ ಕಾಮಗಾರಿ ಪೂರ್ಣಗೊಳಿಸಿರಲಿಲ್ಲ. ನ್ಯಾಯಾಲಯದ ಆದೇಶದಂತೆ, ಈವರೆಗೆ ಪೂರ್ಣಗೊಂಡಿರುವ ಕಾಮಗಾರಿಗೆ ಮಾತ್ರ ಬಿಲ್‌ ಪಾವತಿಸಲಾಗುವುದು. ₹ 98.50 ಕೋಟಿ ವೆಚ್ಚದ ಕಾಮಗಾರಿಗಳಿಗೆ ಹೊಸದಾಗಿ ಟೆಂಡರ್‌ ಪ್ರಕ್ರಿಯೆ ನಡೆಸಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ’ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಈ ಯೋಜನೆಯಿಂದ ಚಿಕ್ಕನಾಯ್ಕನಹಳ್ಳಿ ತಾಲ್ಲೂಕಿನ ಬಹುಭಾಗಕ್ಕೆ ಅನುಕೂಲವಾಗಲಿದೆ. ಹೇಮಾವತಿ ಯೋಜನೆಯ ನೀರು ಆ ಪ್ರದೇಶವನ್ನು ತಲುಪಲು ಇರುವ ತೊಡಕುಗಳು ನಿವಾರಣೆಯಾಗಲಿವೆ. ಈ ಕಾಮಗಾರಿ ಪೂರ್ಣಗೊಂಡರೆ 26 ಕೆರೆಗಳು ಭರ್ತಿಯಾಗುತ್ತವೆ. ಇದರಿಂದ ಅಲ್ಲಿನ ನೀರಿನ ಕೊರತೆ ನೀಗಿಸಲು ಸಾಧ್ಯವಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT