ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಅಕ್ರಮಕ್ಕೆ ಕಡಿವಾಣ, ಕಾಂಗ್ರೆಸ್ ಆಗ್ರಹ

Last Updated 31 ಜುಲೈ 2021, 8:10 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ, ಅನೈತಿಕ ಚಟುವಟಿಕೆಗಳಿಗೆ ಕಡಿವಾಣ ಹಾಕುವಂತೆ ಕಾಂಗ್ರೆಸ್ ಮುಖಂಡರ ನೇತೃತ್ವದ ನಿಯೋಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಒತ್ತಾಯಿಸಿದೆ.

ಎಸ್‌ಪಿ ರಾಹುಲ್‍ಕುಮಾರ್ ಶಹಾಪುರವಾಡ್ ಅವರನ್ನು ಶುಕ್ರವಾರ ಭೇಟಿಮಾಡಿ ಮನವಿ ಸಲ್ಲಿಸಿದರು.

ಕೋವಿಡ್‍ನಿಂದ ಕೆಲಸ ಕಳೆದುಕೊಂಡು ಗ್ರಾಮಗಳಿಗೆ ಬಂದಿರುವ ಕೆಲ ಯುವಕರು ದುಶ್ಚಟಗಳಿಗೆ ದಾಸರಾಗಿ, ಇಸ್ಪೀಟ್, ಮಟ್ಕಾ ದಂಧೆ, ಮಾದಕವಸ್ತು ಸೇವನೆ ಸೇರಿದಂತೆ ಹಲವು ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಪ್ರತಿ ತಾಲ್ಲೂಕಿನಲ್ಲಿ ತಿಂಗಳಿಗೊಮ್ಮೆ ಜನ ಸಂಪರ್ಕ ಸಭೆ ನಡೆಸಿ ಜನರಿಗೆ ಆತ್ಮವಿಶ್ವಾಸ ತುಂಬಬೇಕು. ಸಮಸ್ಯೆ
ಗಳನ್ನು ಪರಿಹರಿಸಲು ಪ್ರಯತ್ನ ಮಾಡ
ಬೇಕು. ಕಲ್ಲು, ಮರಳು ಗಣಿಗಾರಿಕೆಯನ್ನು ಹತೋಟಿಗೆ ತರಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಮುರಳೀಧರ ಹಾಲಪ್ಪ ಆಗ್ರಹಿಸಿದರು.

ಪ್ರತಿ 25 ಕಿ.ಮೀ ವ್ಯಾಪ್ತಿಯಲ್ಲಿ ಪೊಲೀಸ್ ಠಾಣೆ ಅಥವಾ ಉಪ ಠಾಣೆ ಇದ್ದರೆ ಅಕ್ರಮ ಚಟುವಟಿಕೆ ಪತ್ತೆ ಮಾಡಲು ಸಹಕಾರಿಯಾಗುತ್ತದೆ. ಖಾಲಿ ಹುದ್ದೆ ಭರ್ತಿ ಮಾಡಬೇಕು ಎಂದು ಹೇಳಿದರು.

ಸಮಸ್ಯೆಗಳನ್ನು ಆಲಿಸಿದ ಎಸ್‌ಪಿ, ‘ಅಕ್ರಮ ಚಟುವಟಿಕೆಗಳ ಕಡಿವಾಣಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಗುಬ್ಬಿ ಭಾಗದಲ್ಲಿ ಇಸ್ಪೀಟ್ ಜೂಜಾಟ ಹೆಚ್ಚಾಗಿದ್ದು, ಅಲ್ಲಿನ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಗಾಂಜಾ, ಅಫೀಮು ಮಾರಾಟ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ಕ್ರಮ ಜರುಗಿಸಲಾಗುವುದು. ಅನುಮತಿ ಪಡೆದು ದಿಬ್ಬೂರಿನಲ್ಲಿ ಹೊರ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು’ ಎಂದು ಭರವಸೆ ನೀಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ರಾಮಕೃಷ್ಠ, ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್,ಮುಖಂಡರಾದ ಅನಿಲ್‍ಕುಮಾರ್, ರೇವಣಸಿದ್ದಪ್ಪ, ಚೌದ್ರಿ ರಂಗಪ್ಪ, ಸಿದ್ದಲಿಂಗೇಗೌಡ, ಮರಿಚನ್ನಮ್ಮ, ಸಂಜೀವ್‍ಕುಮಾರ್, ಟಿ.ಎಸ್.ನಿರಂಜನ್, ವೈ.ಎನ್.ನಾಗರಾಜ್, ಎನ್.ಮಂಜುನಾಥ್, ಪ್ರಕಾಶ್, ಎಸ್.ವಿ.ಗೀತ, ರೂಪತಾರ, ಮಂಜುಳಾ ಆರಾಧ್ಯ, ಗೀತಮ್ಮ, ಗುರುಪ್ರಸಾದ್, ಶಿವಪ್ರಸಾದ್, ಶಿವರಾಜ್, ನರಸಿಂಹಮೂರ್ತಿ, ಸೈಯದ್ ಬುರಾನ್, ಇಲಾಹಿ, ಎಮ್ಮೆದೊಡ್ಡಿ ಜಯಣ್ಣ, ಆಶಿಷ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT