ಬುಧವಾರ, ಏಪ್ರಿಲ್ 14, 2021
24 °C

ಸಿಲಿಂಡರ್ ತೂಕ ವ್ಯತ್ಯಾಸ ಮೊಕದ್ದಮೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಿಲ್ಲೆಯ ಶಿರಾ ನಗರದ ಪ್ರಭು ಎಂಟರ್‌ ಪ್ರೈಸಸ್‌ನ ಇಂಡೇನ್ ಗ್ಯಾಸ್ ಸಿಲಿಂಡರ್ ವಿತರಕರಿಂದ ಗ್ರಾಹಕರಿಗೆ ಸರಬರಾಜಾಗಿದ್ದ ಗ್ಯಾಸ್ ಸಿಲಿಂಡರ್‌ಗಳ ತೂಕದಲ್ಲಿ ಕಡಿಮೆ ಇರುವುದು ಕಂಡು ಬಂದಿದ್ದು, ವಿತರಕರ ಮೇಲೆ ಮೊಕದ್ದಮೆ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.

ಪತ್ರಿಕೆಗಳಲ್ಲಿ ಪ್ರಕಟವಾದ ವರದಿ ಆಧಾರದ ಮೇಲೆ ಮಾರ್ಚ್ 2ರಂದು ಪ್ರಭು ಎಂಟರ್ ಪ್ರೈಸಸ್ ಅಂಗಡಿ ಮಳಿಗೆಗೆ ಭೇಟಿ ನೀಡಿ ತಪಾಸಣೆ ನಡೆಸಿದಾಗ ಸಿಲಿಂಡರ್‌ಗಳಲ್ಲಿ ತೂಕ ಕಡಿಮೆ ಇರುವುದು ಕಂಡುಬಂದಿದ್ದು, ಮೊಕದ್ದಮೆ ದಾಖಲಿಸಲಾಗಿದೆ.

ಜಿಲ್ಲೆಯ ಎಲ್ಲಾ ಅಡುಗೆ ಅನಿಲ ಸಿಲಿಂಡರ್ ವಿತರಕರು ಗ್ರಾಹಕರಿಗೆ ಗ್ಯಾಸ್ ಸಿಲಿಂಡರ್‌ಗಳನ್ನು ಸರಬರಾಜು ಮಾಡುವಾಗ ಕಡ್ಡಾಯವಾಗಿ ತೂಕ ಮಾಡಿ ವಿತರಿಸಬೇಕು. ಇಂತಹ ಪ್ರಕರಣಗಳು ಇನ್ನು ಮುಂದೆ ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರು ತಿಳಿಸಿದ್ದಾರೆ.

ಗ್ರಾಹಕರು ಯಾವುದೇ ತೂಕ ಮತ್ತು ಅಳತೆಗೆ ಸಂಬಂಧಿಸಿದಂತೆ ದೂರುಗಳಿದ್ದಲ್ಲಿ ಜಿಲ್ಲಾ ಕಾನೂನು ಮಾಪನಶಾಸ್ತ್ರ ಸಹಾಯಕ ನಿಯಂತ್ರಕರ ಕಚೇರಿ, 3ನೇ ಕ್ರಾಸ್, ಗಾಂಧಿನಗರ, ತುಮಕೂರು– ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ
ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು