ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲೆಗೆ ನೀರು ಹರಿಸಿದ್ದು ದೇವರಾಜ ಅರಸರು

ಡಿ.ದೇವರಾಜ ಅರಸು ಜನ್ಮ ದಿನ ಆಚರಣೆ
Published : 21 ಆಗಸ್ಟ್ 2024, 5:28 IST
Last Updated : 21 ಆಗಸ್ಟ್ 2024, 5:28 IST
ಫಾಲೋ ಮಾಡಿ
Comments

ತುಮಕೂರು: ಹೇಮಾವತಿ ನೀರಿಗಾಗಿ 1960ರಿಂದ ಪ್ರಯತ್ನಿಸಿದರೂ, ದೇವರಾಜ ಅರಸು ಮುಖ್ಯಮಂತ್ರಿಯಾಗಿದ್ದಾಗ ಆಸಕ್ತಿ ವಹಿಸಿ ಜಿಲ್ಲೆಗೆ ನೀರು ಹರಿಯುವಂತೆ ಮಾಡಿದರು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್‌ ಸ್ಮರಿಸಿದರು.

ನಗರದಲ್ಲಿ ಮಂಗಳವಾರ ಜಿಲ್ಲಾ ಆಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜದ ಮುನ್ನೆಲೆಗೆ ಬಾರದ, ತುಳಿತಕ್ಕೆ ಒಳಗಾಗಿದ್ದ ಹಿಂದುಳಿದ ವರ್ಗಗಳ ಆತ್ಮ ಗೌರವ ಹೆಚ್ಚುವಂತೆ ಮಾಡಿದ್ದರು. ಪರಿವರ್ತನೆಯ ಹರಿಕಾರ ಅರಸು ಅವರ ರಾಜಕೀಯ ಜೀವನ ಸ್ಫೂರ್ತಿದಾಯಕವಾದದ್ದು. ಮಹಾನ್‌ ವ್ಯಕ್ತಿಗಳನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ, ಅವರ ಸಾಧನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಬೇಕು ಎಂದರು.

ವಿ.ವಿ ಕಲಾ ಕಾಲೇಜು ಪ್ರಾಂಶುಪಾಲ ಪ್ರೊ.ಬಿ.ಕರಿಯಣ್ಣ, ‘ದೇವರಾಜು ಅರಸು ಕುವೆಂಪು ಅವರ ಬರವಣಿಗೆಗಳಿಂದ ಪ್ರೇರೇಪಿತರಾಗಿ ಅರಣ್ಯ ಸಂರಕ್ಷಣೆ ಕಾಯ್ದೆ, ಭೂ-ಸುಧಾರಣೆ ಕಾಯ್ದೆ ಸೇರಿ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದರು. ಹಿಂದುಳಿದ ವರ್ಗದವರು ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶ್ರಮಿಸಿದ್ದರು. ಅವರ ಕೆಲಸಗಳಿಂದ ನಮ್ಮ ಮಧ್ಯೆ ಸದಾ ಜೀವಂತವಾಗಿದ್ದಾರೆ’ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಕೆ.ಪಿ.ಲಕ್ಷ್ಮಿಕಾಂತರಾಜೇ ಅರಸ್‍, ಹೆಬ್ಬೂರು ಶ್ರೀನಿವಾಸ್, ಗುರುಪ್ರಸಾದ್‌, ಅಶ್ವತ್ಥ ನಾರಾಯಣ್‌, ಸಿ.ಎಸ್.ಮಂಜುನಾಥ್‌ ಅವರನ್ನು ಸನ್ಮಾನಿಸಲಾಯಿತು.

ಉಪವಿಭಾಗಾಧಿಕಾರಿ ಗೌರವ್‌ಕುಮಾರ್‌ ಶೆಟ್ಟಿ, ತಹಶೀಲ್ದಾರ್ ಎಂ.ಸಿದ್ದೇಶ್‌, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಸೋನಿಯಾ ವೆರ್ಣೇಕರ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಬಿ.ಸಿ.ಶಾರದಮ್ಮ, ಡಿಡಿಪಿಐ ಕೆ.ಮಂಜುನಾಥ್‌, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಕೃಷ್ಣಪ್ಪ, ಕಾರ್ಮಿಕ ಇಲಾಖೆ ಅಧಿಕಾರಿ ಕೆ.ತೇಜಾವತಿ, ರೇಷ್ಮೆ ಇಲಾಖೆ ಉಪನಿರ್ದೇಶಕ ಲಕ್ಷ್ಮಿನರಸಿಂಹಯ್ಯ, ಮುಖಂಡರಾದ ಟಿ.ಆರ್‌.ಆಂಜಿನಪ್ಪ, ಧನಿಯಾಕುಮಾರ್‌, ಟಿ.ಎನ್‌.ಮಧುಕರ್‌ ಇತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT