ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕನಾಯಕನಹಳ್ಳಿ | ವೇತನ ತಡೆ: ಆತ್ಮಹತ್ಯೆಗೆ ಯತ್ನಿಸಿದ ‘ಡಿ’ ಗ್ರೂಪ್‌ ನೌಕರ

Published 21 ಡಿಸೆಂಬರ್ 2023, 16:03 IST
Last Updated 21 ಡಿಸೆಂಬರ್ 2023, 16:03 IST
ಅಕ್ಷರ ಗಾತ್ರ

ಚಿಕ್ಕನಾಯಕನಹಳ್ಳಿ: ವೇತನ ತಡೆಹಿಡಿದಿದ್ದಾರೆ ಎನ್ನುವ ಕಾರಣಕ್ಕೆ ಪಟ್ಟಣದ ವಲಯ ಅರಣ್ಯಾಧಿಕಾರಿ ಕಚೇರಿಯ ‘ಡಿ’ ಗ್ರೂಪ್‌ ನೌಕರ ರವಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವೇತನ ನೀಡಿಲ್ಲ ಎಂದು ಆರೋಪಿಸಿದ ರವಿ ಮದ್ಯಸೇವಿಸಿ ಕಚೇರಿ ಮುಂದೆ ಬುಧವಾರ ಧರಣಿ ಕುಳಿತಿದ್ದ. ಮದ್ಯದ ಅಮಲಿನಲ್ಲಿದ್ದ ಆತ ಮಧ್ಯಾಹ್ನ ವಿಷ ಸೇವಿಸಿದ್ದಾನೆ ಎನ್ನಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಮದ್ಯ ವ್ಯಸನಿಯಾಗಿದ್ದ ಈತ ನಿತ್ಯ ಕಚೇರಿಗೆ ಕುಡಿದು ಬರುತ್ತಿದ್ದ. ಶಿಕ್ಷೆಯ ರೂಪದಲ್ಲಿ ಆತನ ವೇತನ ತಡೆಹಿಡಿಯಲಾಗಿತ್ತು. ಜಿಲ್ಲಾಸ್ಪತ್ರೆಯಲ್ಲಿರುವ ಆತನನ್ನು ನಮ್ಮ ಅಧಿಕಾರಿಗಳು ನೋಡಿಕೊಂಡು ಬಂದಿದ್ದಾರೆ’ ಎಂದು ತಿಪಟೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರತಿಕ್ರಿಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT