ಭಾನುವಾರ, ಮೇ 29, 2022
21 °C

ಹೈನುಗಾರಿಕೆ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಲಾಭದಾಯಕ ಹೈನುಗಾರಿಕೆ ಹಾಗೂ ಜಾನುವಾರು ನಿರ್ವಹಣೆ ಕುರಿತು ತರಬೇತಿ ಮೂಲಕ ರೈತರ ಸಾಮರ್ಥ್ಯ ಹೆಚ್ಚಿಸುವ ಕಾರ್ಯಕ್ಕೆ ಭಾರತೀಯ ಕೃಷಿ ಅನುಸಂಧಾನ ಪರಿಷತ್ ಹಾಗೂ ಕೃಷಿ ವಿಶ್ವವಿದ್ಯಾಲಯ ಮುಂದಾಗಿದೆ.

ತಿಪಟೂರು ತಾಲ್ಲೂಕು ಕೊನೇಹಳ್ಳಿ ಬಿದರೆಗುಡಿ ಕಾವಲ್‌ನಲ್ಲಿ ಇರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಫೆಬ್ರುವರಿ ಮೊದಲ ವಾರ ತರಬೇತಿ ನೀಡಲಾಗುತ್ತದೆ. ಕೆವಿಕೆ ವ್ಯಾಪ್ತಿಗೆ ಬರುವ ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಕುಣಿಗಲ್, ಗುಬ್ಬಿ ತಾಲ್ಲೂಕಿನ ರೈತರು ತರಬೇತಿಗೆ ಹಾಜರಾಗಬಹುದು. ಮೊಬೈಲ್‌ 72592 00919, 96633 30296 ಮೂಲಕ ನೋಂದಾಯಿಸಿಕೊಳ್ಳಬೇಕು.

ವೈಜ್ಞಾನಿಕವಾಗಿ ಹೈನುಗಾರಿಕೆ, ಉದ್ಯಮಶೀಲತೆ ಅಭಿವೃದ್ಧಿ, ಕುರಿ, ಮೇಕೆ, ಕೋಳಿ ಸಾಕಾಣಿಕೆ, ಕೊಟ್ಟಿಗೆ ಪದ್ಧತಿಯಲ್ಲಿ ಕುರಿ, ಮೇಕೆ ಸಾಕಾಣಿಕೆ ಬಗ್ಗೆ ತರಬೇತಿ ನೀಡಲಾಗುತ್ತದೆ. ಉಚಿತ ಊಟ, ವಸತಿ ಸೌಲಭ್ಯ ಇರುತ್ತದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ವಿ. ಗೋವಿಂದಗೌಡ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.