ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿ ದಳವಾಯಿಹಳ್ಳಿಯಲ್ಲಿ ನೀರು ಶುದ್ಧೀಕರಣ ಘಟಕ ಸ್ಥಗಿತಗೊಂಡು ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕುಡಿಯುವ ನೀರನ್ನು ಟ್ಯಾಂಕರ್ನಿಂದ ಖರೀದಿಸಬೇಕಿದೆ. ಬೇಸಿಗೆಯಲ್ಲಿ ಕೊಳವೆ ಬಾವಿಗಳಲ್ಲಿಯೂ ನೀರು ಕಡಿಮೆಯಾಗಿರುವ ಕಾರಣ ದೂರದ ಜಮೀನುಗಳಿಗೆ ಹೋಗಿ ನೀರು ತರಬೇಕಿದೆ. ಬಿಸಿಲ ಬೇಗೆಯಲ್ಲಿ ನೀರು ತರುವುದೇ ಮಹಿಳೆಯರಿಗೆ ಸಮಸ್ಯೆಯಾಗಿದೆ ಎಂದು ಆರೋಪಿಸಿದರು.

ದ್ವಿಚಕ್ರ ವಾಹನ, ವಾಹನ ಇರುವವರು ದೂರದಿಂದ ನೀರು ತರುತ್ತಾರೆ. ಆದರೆ ವಾಹನಗಳಿಲ್ಲದವರುಅನಿವಾರ್ಯವಾಗಿ ನೀರು ಖರೀದಿಸಬೇಕಿದೆ. ಗ್ರಾಮದಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಧಿಕಾರಿಗಳು ಸಮಸ್ಯೆ ಬಗೆಹರಿಸುವ ಬಗ್ಗೆ ಗಮನಹರಿಸಬೇಕು ಎಂದು ಡಿ.ಇ. ಪಾಲಯ್ಯ ಒತ್ತಾಯಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-17-1099894959

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.