ತುಮಕೂರು: ಕಳೆದ ಎರಡು ದಿನಗಳಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಬುಧವಾರ ತೆರೆಬಿತ್ತು. ಬೆಳಿಗ್ಗೆ ಮೋಡ ಕವಿದ ವಾತಾವರಣದಲ್ಲಿ ವಿವಿಧ ಪಂದ್ಯಗಳು ನಡೆದವು.

ಸಾಕಷ್ಟು ಅವ್ಯವಸ್ಥೆ, ಅರ್ಹರಲ್ಲದವರಿಗೂ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿರುವುದು ಹಾಗೂ ಸರಿಯಾದ ಸಿದ್ಧತೆಗಳು ಇಲ್ಲದೆ ಕ್ರೀಡಾಕೂಟ ಆಯೋಜನೆ ಮಾಡಿದ್ದು ಕ್ರೀಡಾಪಟುಗಳ ಆಕ್ರೋಶಕ್ಕೆ ಕಾರಣವಾಯಿತು. ಗೊಂದಲದಲ್ಲೇ ಕ್ರೀಡಾಕೂಟ ಮುಕ್ತಾಯ ಕಂಡಿತು.

ಒಳಾಂಗಣ ಕ್ರೀಡಾಂಗಣದಲ್ಲಿ ಕೊಕ್ಕೊ, ಕಬಡ್ಡಿ ಪಂದ್ಯಗಳು ಜರುಗಿದವು. ಮಂಗಳವಾರ ಅಥ್ಲೆಟಿಕ್ಸ್ ಸ್ಪರ್ಧೆಗಳು ಮುಗಿದಿದ್ದು, ಬುಧವಾರ ಗುಂಪು ಸ್ಪರ್ಧೆ ಆಯೋಜಿಸಲಾಗಿತ್ತು. ಕಬಡ್ಡಿ ಪುರುಷರ ವಿಭಾಗದಲ್ಲಿ ಕುಣಿಗಲ್ ಮೊದಲ ಸ್ಥಾನ ಪಡೆದರೆ, ಮಧುಗಿರಿ ದ್ವಿತೀಯ ಸ್ಥಾನಕ್ಕೆ ತೃಪ್ತಿ ಪಡಬೇಕಾಯಿತು. ಮಹಿಳೆಯರ ವಿಭಾಗದಲ್ಲಿ ಗುಬ್ಬಿ, ತುಮಕೂರು ಕ್ರಮವಾಗಿ ಮೊದಲೆರಡು ಪ್ರಶಸ್ತಿಗಳಿಗೆ ಭಾಜನವಾದವು.

ಪುರುಷರ ಥ್ರೋಬಾಲ್ ಫೈನಲ್ ಪಂದ್ಯದಲ್ಲಿ ತಿಪಟೂರು ತಂಡವನ್ನು ಮಣಿಸಿದ ಶಿರಾ ಪ್ರಶಸ್ತಿ ತನ್ನದಾಗಿಸಿಕೊಂಡಿತು. ತುಮಕೂರು ಮಹಿಳಾ ತಂಡಕ್ಕೆ ಸೋಲುಣಿಸಿದ ತಿಪಟೂರು ಆಟಗಾರ್ತಿಯರು ಗೆಲುವಿನ ಸಂಭ್ರಮಾಚರಣೆ ಮಾಡಿದರು. ಬ್ಯಾಸ್ಕೆಟ್ಬಾಲ್ ಸ್ಪರ್ಧೆಯ ಅಂತಿಮ ಪಂದ್ಯದಲ್ಲಿ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ತುಮಕೂರು ಹಾಗೂ ತುಮಕೂರು ಗ್ರಾಮಾಂತರ ತಂಡಗಳು ಮುಖಾಮುಖಿಯಾದವು. ಎರಡೂ ವಿಭಾಗದಲ್ಲಿ ತುಮಕೂರು ತಂಡ ಪ್ರಥಮ ಬಹುಮಾನ ಪಡೆಯಿತು.

ವಾಲಿಬಾಲ್ ಪಂದ್ಯಾವಳಿಯ ಮಹಿಳೆಯರ ವಿಭಾಗದಲ್ಲಿ ತುಮಕೂರು ಮತ್ತು ಚಿಕ್ಕನಾಯಕನಹಳ್ಳಿ ತಂಡಗಳ ಮಧ್ಯೆ ಪ್ರಶಸ್ತಿಗೆ ಪೈಪೋಟಿ ಜೋರಾಗಿತ್ತು. ಕೊನೆಗೆ ಆತಿಥೇಯ ತುಮಕೂರು ತಂಡ ಗೆಲವು ಪಡೆಯುವಲ್ಲಿ ಯಶಸ್ವಿಯಾಯಿತು. ಪುರುಷರ ವಿಭಾಗದಲ್ಲಿ ತುಮಕೂರು ಆಟಗಾರರು ತಿಪಟೂರು ತಂಡವನ್ನು ಸೋಲಿಸಿ ವಿಜೇತರಾಗಿ ಹೊರಹೊಮ್ಮಿದರು.

ಪುರುಷರ ಕೊಕ್ಕೊ ಪಂದ್ಯಾವಳಿಯಲ್ಲಿ ಗುಬ್ಬಿ ಮತ್ತು ತುಮಕೂರು ತಂಡಗಳು ಜಂಟಿಯಾಗಿ ಪ್ರಶಸ್ತಿ ಪಡೆದವು. ಮಹಿಳೆಯರ ವಿಭಾಗದಲ್ಲಿ ಗುಬ್ಬಿ ಪ್ರಥಮ, ತುಮಕೂರು ದ್ವಿತೀಯ ಸ್ಥಾನ ಪಡೆಯಿತು.

ಅನರ್ಹರು ಭಾಗಿ

ತಾಲ್ಲೂಕು ಮಟ್ಟದ ಪಂದ್ಯಾವಳಿಯಲ್ಲಿ ಸ್ಪರ್ಧಿಸಿ ವಿಜೇತರಾದವರಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶ ಇರುತ್ತದೆ. ಆದರೆ ಅಧಿಕಾರಿಗಳ ಎಡವಟ್ಟು ಆಯೋಜಕರ ನಿರ್ಲಕ್ಷ್ಯದಿಂದ ತಾಲ್ಲೂಕು ಮಟ್ಟದಲ್ಲಿ ಆಯ್ಕೆಯಾಗದವರು ಸಹ ಜಿಲ್ಲಾ ಹಂತದ ಸ್ಪರ್ಧೆಯಲ್ಲಿ ಪಾಲ್ಗೊಂಡು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ! ಗುರುಪ್ರಸಾದ್ 1500 ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ 5 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು. ಮತ್ತೊಬ್ಬ ಕ್ರೀಡಾಪಟು ಟಿ.ಎಸ್.ಸಂದೀಪ್ 5 ಸಾವಿರ ಮೀಟರ್ ಓಟದಲ್ಲಿ ಮೊದಲ ಸ್ಥಾನ ಪಡೆದಿದ್ದರು. ಈ ಇಬ್ಬರು ತಾಲ್ಲೂಕು ಮಟ್ಟದ ಟೂರ್ನಿಯಲ್ಲಿ ಭಾಗವಹಿಸಿರಲಿಲ್ಲ. ನೇರವಾಗಿ ಜಿಲ್ಲಾ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು. 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದ ಗೌತಮ್ ದೂರು ನೀಡಿದ ನಂತರವೇ ಈ ವಿಚಾರ ಬೆಳಕಿಗೆ ಬಂದಿದೆ. ಯಾವುದೇ ಪೂರ್ವಾಪರ ಪರಿಶೀಲಿಸದೆ ಸ್ಪರ್ಧೆಗೆ ಅವಕಾಶ ನೀಡಿದ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕ್ರೀಡಾಪಟುಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ದಸರಾ ಕ್ರೀಡಾಕೂಟದಲ್ಲಿ ಸ್ವಲ್ಪ ಸಮಸ್ಯೆಯಾಗಿತ್ತು. ದೂರು ಬಂದ ನಂತರ ಕ್ರೀಡಾಪಟುಗಳ ಬಗ್ಗೆ ಪರಿಶೀಲಿಸಲಾಗಿದೆ. ವಿಭಾಗ ಮಟ್ಟದಲ್ಲಿ ಭಾಗವಹಿಸದಂತೆ ಸೂಚಿಸಲಾಗಿದೆ. ಇವರ ನಂತರದ ಸ್ಥಾನ ಪಡೆದವರನ್ನು ವಿಭಾಗ ಮಟ್ಟಕ್ಕೆ ಕಳುಹಿಸಲಾಗುವುದು’ ಎಂದು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಟಿ.ಆರ್.ರೋಹಿತ್ ಗಂಗಾಧರ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.