ತುಮಕೂರು: ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಕುರಿತು ಅರಿವು ಮೂಡಿಸಲು ಮಾರ್ಚ್ 15ರಂದು ಮಧ್ಯಾಹ್ನ 3.30ಕ್ಕೆ ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‍ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಪ್ತಪದಿ ವಿಚಾರ ಸಂಕಿರಣದ ಪೂರ್ವ ಸಿದ್ಧತಾ ಸಭೆಯಲ್ಲಿ ಮತನಾಡಿದ ಅವರು, ‘ದೇವರಾಯನದುರ್ಗ, ಹಳೇವೂರು ಹಾಗೂ ಎಡೆಯೂರು ದೇವಾಲಯಗಳಲ್ಲಿ ಏ.26ರಂದು ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದೆ. ಜನರಿಗೆ ಹೆಚ್ಚಿನ ಮಾಹಿತಿ ನೀಡುವ ಸಲುವಾಗಿ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದರು.

ವಿಚಾರ ಸಂಕಿರಣಕ್ಕೆ ಮುಜರಾಯಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ, ಜಿಲ್ಲೆಯ ಸಂಸದರು ಹಾಗೂ ಶಾಸಕರನ್ನು ಆಹ್ವಾನಿಸಬೇಕು. ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ತ್ರೀಶಕ್ತಿ ಸಂಘಗಳ ಸದಸ್ಯೆಯರು, ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಪಾಲ್ಗೊಳ್ಳಬೇಕು ಎಂದರು.

ಗ್ರಾ.ಪಂ ಅಧ್ಯಕ್ಷೆಯರನ್ನು ಕರೆ ತರಬೇಕು. ವಿಚಾರ ಸಂಕಿರಣ ನಡೆಯುವ ಸ್ಥಳದಲ್ಲಿ 3 ಕೌಂಟರ್‌ಗಳನ್ನು ತೆರೆದು ಹೆಸರು ನೋಂದಣಿಗೆ ಅರ್ಜಿಗಳನ್ನು ವಿತರಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.