ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿ, ಸಿಇಒ, ಆಯುಕ್ತರಿಗೆ ಪ್ರಶಸ್ತಿ

ಉತ್ತಮವಾಗಿ ಚುನಾವಣಾ ಕರ್ತವ್ಯ ನಿರ್ವಹಿಸಿದ ಹೆಗ್ಗಳಿಕೆ
Last Updated 25 ಜನವರಿ 2020, 11:19 IST
ಅಕ್ಷರ ಗಾತ್ರ

ತುಮಕೂರು: 2019ರಲ್ಲಿ ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಉಪ ಚುನಾವಣೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶುಭಾ ಕಲ್ಯಾಣ್ ಹಾಗೂ ಪಾಲಿಕೆ ಆಯುಕ್ತ ಟಿ.ಭೂಬಾಲನ್ ಅವರಿಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಶನಿವಾರ ಪ್ರಶಸ್ತಿ ಪ್ರದಾನ ಮಾಡಿದರು.

ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ನಡೆದ ರಾಜ್ಯಮಟ್ಟದ ರಾಷ್ಟ್ರೀಯ ಮತದಾನ ದಿನಾಚರಣೆ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪ್ರಶಸ್ತಿ ನೀಡಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಚುನಾವಣಾಧಿಕಾರಿ ಸಂಜೀವ್‍ಕುಮಾರ್, ಬಿಬಿಎಂಪಿ ಆಯುಕ್ತ ಬಿ.ಎಚ್.ಅನಿಲ್ ಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT