ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು ಶಾಸಕ DC ಗೌರಿಶಂಕರ್‌ ಆಯ್ಕೆ ಅಸಿಂಧು ಕೋರಿದ ಅರ್ಜಿ: ವಿಚಾರಣೆ ಪೂರ್ಣ

Last Updated 1 ಅಕ್ಟೋಬರ್ 2022, 3:09 IST
ಅಕ್ಷರ ಗಾತ್ರ

ಬೆಂಗಳೂರು: ‘ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ಸಿ. ಗೌರಿಶಂಕರ್‌ ಆಯ್ಕೆ ಅಸಿಂಧುಗೊಳಿಸಬೇಕು’ ಎಂದು ಕೋರಿ ಪರಾಜಿತ ಅಭ್ಯರ್ಥಿ ಬಿ.ಸುರೇಶ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮುಕ್ತಾಯಗೊಳಿಸಿದ್ದು ಆದೇಶ ಕಾಯ್ದಿರಿಸಿದೆ.

ನ್ಯಾಯಮೂರ್ತಿ ಎಸ್.ಸುನಿಲ್ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಾದ–ಪ್ರತಿವಾದ ಆಲಿಕೆ ಪೂರೈಸಿದ ನಂತರ ಲಿಖಿತ ಆಕ್ಷೇಪಣೆ ಸಲ್ಲಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು.

ಏನಿದು ಅರ್ಜಿ?: ‘ಕಳೆದ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌರಿಶಂಕರ್ ವ್ಯಾಪಕ ಚುನಾವಣಾ ಅಕ್ರಮ ಎಸಗಿ ಆಯ್ಕೆಯಾಗಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮತದಾರರಿಗೆ ಮತಯಾಚನೆ ಪತ್ರದ ಜೊತೆ ಗುಂಪು ಆರೋಗ್ಯ ವಿಮಾ ಪಾಲಿಸಿಯ ಆಮಿಷವೊಡ್ಡಿ ಅವರಿಂದ ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಹಾಗಾಗಿ, ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು’ ಎಂದು ಅರ್ಜಿದಾರ ಸುರೇಶ್‌ಗೌಡ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT