ಸಂಚಾರ ನಿಯಮ ಉಲ್ಲಂಘನೆ; ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ

7
ಸಾರಿಗೆ ಇಲಾಖೆ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್ ಆದೇಶ

ಸಂಚಾರ ನಿಯಮ ಉಲ್ಲಂಘನೆ; ನಿರ್ದಾಕ್ಷಿಣ್ಯ ಕ್ರಮ ಜರುಗಿಸಿ

Published:
Updated:
Deccan Herald

ತುಮಕೂರು: ವಾಹನ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸದೇ ಇರುವುದು, ಮೊಬೈಲ್ ಬಳಕೆ, ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದು, ಸಂಚಾರ ಸುರಕ್ಷಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣ ದಾಖಲಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸಾರಿಗೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಾಕೇಶ್‌ಕುಮಾರ್ ಸೂಚಿಸಿದರು.

ಶನಿವಾರ ನಗರದ ಸಾರಿಗೆ ಇಲಾಖೆಯ ಕಚೇರಿಯಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

'ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶದನ್ವಯ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಜಿಲ್ಲೆಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವುದು ಹಾಗೂ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಷ್ಠಾನಗೊಳಿಸಲಿದೆ’ ಎಂದು ಹೇಳಿದರು.

ಇದು ಮೊದಲ ಸಭೆಯಾಗಿದ್ದು ಮುಂದಿನ ಸಭೆಯಲ್ಲಿ ಜಿಲ್ಲೆಯಲ್ಲಿ ಅಪಘಾತಗಳನ್ನು ತಡೆಗಟ್ಟಲು ರಸ್ತೆಗಳ ಸುರಕ್ಷತಾ ಕ್ರಮ ಕೈಗೊಳ್ಳಲು, ರಾಷ್ಟ್ರೀಯ ಹೆದ್ದಾರಿ, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ ತಂಡ ತಾಂತ್ರಿಕ ವರದಿಯನ್ನು 30 ದಿನದೊಳಗೆ ನೀಡುವಂತೆ ಸಂಬಂಧಪಟ್ಟ ಇಲಾಖೆಗೆ ಅಧಿಕಾರಿಗಳಿಗೆ ಸಭೆಯಲ್ಲಿ ಸೂಚನೆ ನೀಡಿದರು.

ಹಾರ್ನ್ ಬದಲಾವಣೆ, ಇಂಧನ ಟ್ಯಾಂಕ್ ಬದಲಾವಣೆ ಮತ್ತಿತರ ವಾಹನಗಳ ಮೂಲ ರಚನೆಯಲ್ಲಿ ಬದಲಾವಣೆ ಮಾಡಿಕೊಳ್ಳುವುದು, ಹೆದ್ದಾರಿಯಲ್ಲಿ ವಾಹನ ನಿಲುಗಡೆ ಮಾಡುವುದು, ರಾತ್ರಿ ವೇಳೆ ಬೆಳಕು ಪ್ರತಿಫಲಿಸುವ ( ಸ್ಪೆಸಿಫಿಕ್ ರಿಫ್ಲೆಕ್ಟ್ಸ್) ಚಿಹ್ನೆ ಬಳಸದಿರುವುದು, ಮದ್ಯಪಾಲ ಮಾಡಿ ವಾಹನ ಚಲಾಯಿಸುವುದು ಸೇರಿದಂತೆ ಮತ್ತಿತರ ಕಾರಣಗಳಿಂದ ಅಪಘಾತಗಳು ಸಂಭವಿಸುತ್ತೇನೆ. ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಯಾವ ಕಾರಣಕ್ಕಾಗಿ ಅಪಘಾತಗಳು ಸಂಭವಿಸುತ್ತಿವೆ. ಅಪಘಾತ ವಲಯಗಳನ್ನು ಗುರುತಿಸುವುದು ಸೇರಿದಂತೆ ಅಪಘಾತ ಸಂಭವಿಸುವುದಕ್ಕೆ ನಿರ್ದಿಷ್ಟ ಕಾರಣಗಳನ್ನು ಪತ್ತೆ ಹಚ್ಚಿ ಸಮಿತಿಗೆ ವರದಿ ಸಲ್ಲಿಸಲು ನಿರ್ದೇಶನ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ದಿವ್ಯಾ ಗೋಪಿನಾಥ್ ಮಾತನಾಡಿ,‘ ಮಹಾನಗರ ಪಾಲಿಕೆಯವತಿಯಿಂದ ನಗರದಲ್ಲಿ ರಸ್ತೆ ಹಾಗೂ ಚರಂಡಿ ಕಾಮಗಾರಿಯನ್ನು ಕೈಗೊಂಡಿರುವುದರಿಂದ ಗುಬ್ಬಿ ಗೇಟ್ ನಿಂದ ಟೌನ್‌ಹಾಲ್‌ ವೃತ್ತದವರೆಗೆ ಬಾರಿ ಸರಕು ವಾಹನಗಳು ಸಂಚರಿಸುತ್ತಿವೆ. ಈ ಭಾಗದ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವಂತೆ ಪಾಲಿಕೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ನಿರ್ದೇಶದನ್ವಯ ರಸ್ತೆ ಸುರಕ್ಷತೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಇದಕ್ಕಾಗಿ ವಿಶ್ವವಿದ್ಯಾಲಯ, ಲೋಕೋಪಯೋಗಿ ಇಲಾಖೆ, ಸಂಘ ಸಂಸ್ಥೆಗಳು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲು ರೂಪುರೇಷೆ ತಯಾರಿಸಬೇಕು ಎಂದು ಸೂಚಿಸಿದರು.

ಸಹಾಯಕ ಪ್ರಾದೇಶಿಕ ಸಾರಿಗೆ ಆಯುಕ್ತ ರಾಜಣ್ಣ, ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು, ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !