ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್‌ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

Published 27 ಫೆಬ್ರುವರಿ 2024, 14:03 IST
Last Updated 27 ಫೆಬ್ರುವರಿ 2024, 14:03 IST
ಅಕ್ಷರ ಗಾತ್ರ

ಕುಣಿಗಲ್: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಂಗಳವಾರ ತಾಲ್ಲೂಕು ಕಚೇರಿ ವಿವಿಧ ಶಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ತಾಲ್ಲೂಕು ಕಚೇರಿಯಲ್ಲಿ ಸ್ವಚ್ಛತೆ ಕಡೆ ಗಮನಹರಿಸದ ಅಧಿಕಾರಿಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಆಧಾರ್ ನೋಂದಣಿ ತಡ ಮಾಡುತ್ತಿರುವುದರಿಂದ ಸರತಿ ಸಾಲಿನಲ್ಲಿ ನಿಂತಿರುವವರ ಸಂಖ್ಯೆ ಹೆಚ್ಚಾಗಿದೆ. ತುರ್ತಾಗಿ ಕಾರ್ಯನಿರ್ವಹಿಸಲು ಸೂಚನೆ ನೀಡಿದರು.

ಭೂ ದಾಖಲೆಗಳ ನಿರ್ವಹಣೆಯಲ್ಲಿ ವಿಫಲರಾಗಿರುವ ಸಿಬ್ಬಂದಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಶಾಸಕ ಡಾ.ರಂಗನಾಥ್ ಮತ್ತು ಸಂಸದ ಡಿ.ಕೆ.ಸುರೇಶ್ ಭೂದಾಖಲೆಗಳನ್ನು ಡಿಜಿಟಲ್ ವ್ಯವಸ್ಥೆಯಲ್ಲಿ ದಾಖಲಿಸಲು ಅಗತ್ಯವಿರುವ ಸ್ಕ್ಯಾನರ್, ಪ್ರಿಂಟರ್ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ. ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕಾಗಿದೆ ಎಂದು ಸೂಚನೆ ನೀಡಿದರು.

ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ವಿಶ್ವನಾಥ್ ಇದ್ದರು.

ಪೂರ್ವಭಾವಿ ಸಭೆ: ಮಾರ್ಚ್ 1ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ಡಾ.ರಂಗನಾಥ್ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದ ಸಿದ್ಧತೆ ಬಗ್ಗೆ ಸಭೆ ನಡೆಸಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಪ್ರಭು, ತಾಲ್ಲೂಕು ಉಸ್ತುವಾರಿ ಅಧಿಕಾರಿ ವಿಶ್ವನಾಥ್ ಮತ್ತು ಜಿಲ್ಲಾ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT