ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸರ ಕರ್ತವ್ಯ ನೆನಪಿಸಿದ ಜಿಲ್ಲಾಧಿಕಾರಿ

Last Updated 7 ಮಾರ್ಚ್ 2021, 3:58 IST
ಅಕ್ಷರ ಗಾತ್ರ

ತುಮಕೂರು: ಪೊಲೀಸರು ತಮ್ಮ ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ನಿಷ್ಪಕ್ಷಪಾತವಾಗಿ ನಡೆದುಕೊಳ್ಳಬೇಕು. ಯಾವುದೇ ವ್ಯಕ್ತಿಯ ಪರ, ರಾಜಕೀಯ ಪಕ್ಷಗಳ ಪರ ಕೆಲಸ ಮಾಡಬಾರದು ಎಂದುಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಕಿವಿಮಾತು ಹೇಳಿದರು.

ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆಯುವ ಪೊಲೀಸರ ಕ್ರೀಡಾ
ಕೂಟಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು. ಎಲ್ಲರನ್ನೂ, ಎಲ್ಲ
ವನ್ನೂ ಸಮಾನವಾಗಿ ನೋಡಬೇಕು. ನೊಂದವರು, ನ್ಯಾಯದ ಪರ ಕೆಲಸ ನಿರ್ವಹಿಸಬೇಕು. ಆಗ ಮಾತ್ರ ಪೊಲೀ
ಸರಿಗೆ ಒಳ್ಳೆ ಹೆಸರು ಬರುತ್ತದೆ ಎಂದರು.

ಅಪರಾಧ ಪ್ರಕರಣಗಳ ನಿಯಂತ್ರಣ, ಕಾನೂನು ಸುವ್ಯವಸ್ಥೆ ಕಾಪಾಡಲು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ಪೊಲೀಸರ ಮೇಲಿನ ಒತ್ತಡ ನಿವಾರಣೆಗೆ ಕ್ರೀಡೆ ಸಹಕಾರಿಯಾಗಿದೆ. ಜನರು ಸದಾ ಗಮನಿಸುತ್ತಿರುತ್ತಾರೆ. ಪ್ರತಿ ಕ್ಷಣವೂ ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಸಹಜವಾಗಿ ಒತ್ತಡ ನಿರ್ಮಾಣವಾಗುತ್ತದೆ. ಹಾಗಾಗಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು, ಯೋಗ ಮಾಡಿದರೆ ಒತ್ತಡ ನಿವಾರಿಸಿಕೊಳ್ಳಬಹುದು. ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ನೆರವಿಗೆ ಬರಲಿದೆ ಎಂದು ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಂಶಿಕೃಷ್ಣ ಸ್ವಾಗತಿಸಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT