ಶುಕ್ರವಾರ, ಜನವರಿ 21, 2022
29 °C

ಮೂರು ತಿಂಗಳ ಬಳಿಕ ‘ಮೃತವ್ಯಕ್ತಿ’ ಪ್ರತ್ಯಕ್ಷ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಡಿಗೇನಹಳ್ಳಿ (ತುಮಕೂರು): ಮೃತಪಟ್ಟಿದ್ದಾರೆ ಎಂದು ಕುಟುಂಬದವರು ನಂಬಿದ್ದ ವ್ಯಕ್ತಿಯೊಬ್ಬರು ಮೂರು ತಿಂಗಳ ಬಳಿಕ ಮಂಗಳವಾರ ದಿಢೀರ್‌ ಪ್ರತ್ಯಕ್ಷರಾಗಿ ಎಲ್ಲರಿಗೂ ಅಚ್ಚರಿ ಮೂಡಿಸಿದರು! 

ಚಿಕ್ಕಮಾಲೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲತಾ ಅವರ ತಂದೆ ನಾಗರಾಜಪ್ಪ (55) ಅವರನ್ನು ಮಾನಸಿಕ ಅಸ್ವಸ್ಥತೆ ಕಾರಣಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಗರಾಜಪ್ಪ ಮೃತಪಟ್ಟಿದ್ದಾರೆ ಎಂದು ಮೂರು ತಿಂಗಳ ಹಿಂದೆ ಆಸ್ಪತ್ರೆಯ ಸಿಬ್ಬಂದಿ ಶವವೊಂದನ್ನು ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಕುಟುಂಬದವರು ಶವಸಂಸ್ಕಾರವನ್ನೂ ನೆರವೇರಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು