ಬುಧವಾರ, ಸೆಪ್ಟೆಂಬರ್ 18, 2019
25 °C

ಮಾಜಿ ಶಾಸಕ ಸಿ.ವೀರಭದ್ರಯ್ಯ ನಿಧನ

Published:
Updated:
Prajavani

ಕೊರಟಗೆರೆ: ಕೊರಟಗೆರೆ ಕ್ಷೇತ್ರದ ಮಾಜಿ ಶಾಸಕ ಸಿ.ವೀರಭದ್ರಯ್ಯ (98) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು.

ಮೃತರಿಗೆ ಇಬ್ಬರು ಪತ್ನಿ, ಇಬ್ಬರು ಪುತ್ರರು, ಆರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಹುಟ್ಟೂರಾದ ಎಲೆರಾಂಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ನೆರವೇರಿತು.

1989ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದರು. 1994ರ ಚುನಾವಣೆಯಲ್ಲಿ ಸೋತ ನಂತರ ರಾಜಕೀಯದಿಂದ ದೂರ ಉಳಿದಿದ್ದರು.

ವೀರಭದ್ರಯ್ಯ 15 ವರ್ಷ ತುಮಕೂರು ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷರಾಗಿದ್ದರು. ತಾಲ್ಲೂಕಿನ ಸಿದ್ಧರಬೆಟ್ಟದ ರಂಭಾಪುರಿ ಶಾಖಾ ಮಠದ ಅಧ್ಯಕ್ಷ ಹಾಗೂ ಬೆಂಗಳೂರಿನ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು.

Post Comments (+)