ಮಂಗಳವಾರ, ಜನವರಿ 26, 2021
28 °C

ಮಹಡಿಯಿಂದ ಬಿದ್ದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕನಾಯಕನಹಳ್ಳಿ: ಮನೆಯ ಮಹಡಿ ಮೇಲೆ ಆಟವಾಡುತ್ತಿರುವಾಗ ಆಯತಪ್ಪಿ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ಶುಕ್ರವಾರ ಸಂಜೆ ನಡೆದಿದೆ.

9ನೇ ತರಗತಿ ವಿದ್ಯಾರ್ಥಿನಿ ಮಧುಬಿಂದು(15) ಪಟ್ಟಣದ ಕುಣಿಗಲ್‌ ರಸ್ತೆಯಲ್ಲಿರುವ ತಮ್ಮ ಮನೆಯ ಮಹಡಿ ಮೇಲೆ ಆಟವಾಡುತ್ತಿದ್ದರು. ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಬಿದ್ದಿರುವ ರಭಸಕ್ಕೆ ಕಾಂಪೌಂಡ್‌ನ ಕಬ್ಬಿಣದ ಸರಳುಗಳು ಹೊಟ್ಟೆ ಹಾಗೂ ಎದೆಯ ಭಾಗಕ್ಕೆ ಹೊಕ್ಕಿವೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯ ಲಾಗಿದೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಮಧುಬಿಂದು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶಿರಸ್ತೆದಾರ್ ಆಗಿರುವ ರವಿಕುಮಾರ್ ಅವರ ಮಗಳು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು