ಮಧುಗಿರಿ: ‘ನನ್ನ ಬಗ್ಗೆ ಜನರು ಕೆಟ್ಟದಾಗಿ ಮಾತನಾಡಿಕೊಳ್ಳುತ್ತಿದ್ದಾರೆ’ ಎಂದು ಡೆತ್ ನೋಟ್ ಬರೆದಿಟ್ಟು ತಾಲ್ಲೂಕಿನ ಮುದ್ದನೇರೇಳೆಕೆರೆ ಸರ್ಕಾರಿ ಶಾಲೆ ಅತಿಥಿ ಶಿಕ್ಷಕಿ ನಾಗರತ್ನ (34) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನಾಗರತ್ನ ಪತಿ ಪ್ರದೀಪ ಲಾರಿ ಚಾಲಕರಾಗಿದ್ದಾರೆ. ತಾಲ್ಲೂಕಿನ ಕೊಡ್ಲಾಪುರ ನಿವಾಸಿಯಾಗಿದ್ದು, ಪಟ್ಟಣದ ಲಾಲಪೇಟೆಯಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಸೋಮವಾರ ಪತಿ ಕೆಲಸಕ್ಕೆಂದು ಬೆಂಗಳೂರಿಗೆ ಹಾಗೂ ಮಕ್ಕಳು ಶಾಲೆಗೆ ಹೋದ ನಂತರ ನಾಗರತ್ನ ಅವರು, ‘ನನ್ನ ಬಗ್ಗೆ ಸಾರ್ವಜನಿಕರು ಕೆಟ್ಟದಾಗಿ ಮಾತನಾಡಿಕೊಳ್ಳುತ್ತಿದ್ದು, ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ನನ್ನ ಸಾವಿಗೆ ನಾನೇ ಕಾರಣ. ಗಂಡ ನನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತಿದ್ದರು’ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾರೆ.

ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.