ಸೋಮವಾರ, ಆಗಸ್ಟ್ 2, 2021
28 °C

ಹಾವು ಕಡಿತದಿಂದ ರೈತ ಸಂಘದ ರಾಜ್ಯ ಕಾರ್ಯದರ್ಶಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತಿಪಟೂರು: ತಾಲ್ಲೂಕಿನ ‌ಬೆನ್ನಾಯಕನಹಳ್ಳಿ ಗ್ರಾಮದ ರಾಜ್ಯ ರೈತ ಸಂಘದ ಕಾರ್ಯದರ್ಶಿ ಬಿ.ಎಸ್.ದೇವರಾಜು ಮನೆಯ ಬಳಿಯಲ್ಲಿ ಹಾವು ಕಚ್ಚಿ ಮೃತಪಟ್ಟಿರುವ ಘಟನೆ‌ ನಡೆದಿದೆ.

ಹಲವು ದಶಕಗಳ ಕಾಲದಿಂದಲೂ ರೈತರ ಸಮಸ್ಯೆಗಳನ್ನು ಪರಿಹರಿಸಲು ಹೋರಟ ನಡೆಸುತ್ತಾ ಬಂದಿದ್ದರು. ಗ್ರಾಮ ಮಟ್ಟಗಳಲ್ಲಿ ರೈತ ಸಂಘದ ಸಂಘಟಿಸುವಲ್ಲಿ ಯಶಸ್ವಿಯಾಗಿದ್ದರು.

ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆಯು ಗ್ರಾಮದ ತೋಟದಲ್ಲಿ ಸೋಮವಾರ ನಡೆಯಲಿದೆ ಎಂದು ಕುಟುಂಬದ‌ ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು