ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇಗುಲಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ನಿರ್ಣಯ

Published 4 ಮಾರ್ಚ್ 2024, 4:40 IST
Last Updated 4 ಮಾರ್ಚ್ 2024, 4:40 IST
ಅಕ್ಷರ ಗಾತ್ರ

ತುಮಕೂರು: ದೇಗುಲ, ಮಠ, ಮಂದಿರಗಳ ರಕ್ಷಣೆ ನಮ್ಮೆಲ್ಲರ ಕರ್ತವ್ಯ. ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುವ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಎಲ್ಲರು ಕೇಂದ್ರಗಳ ಅಭಿವೃದ್ಧಿಗೆ ಮುಂದಾಗಬೇಕು ಎಂದು ಕೊರಟಗೆರೆ ತಾಲ್ಲೂಕಿನ ಸಿದ್ಧರಬೆಟ್ಟದ ಬಾಳೆಹೊನ್ನೂರು ಶಾಖಾ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಭಾನುವಾರ ಕರ್ನಾಟಕ ದೇವಸ್ಥಾನ–ಮಠ ಮತ್ತು ಧಾರ್ಮಿಕ ಸಂಸ್ಥೆಗಳ ಮಹಾ ಸಂಘವು ಹಿಂದೂ ಜನಜಾಗೃತಿ ಸಮಿತಿಯ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದೇವಸ್ಥಾನ ಪರಿಷತ್ತು ಸಭೆಯಲ್ಲಿ ಮಾತನಾಡಿದರು.

ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ಸಮನ್ವಯಕಾರ ಚಂದ್ರ ಮೊಗವೀರ್‌, ‘ರಾಜ್ಯದಲ್ಲಿ 25 ಸಾವಿರ ದೇವಸ್ಥಾನಗಳ ಜಾಗ ಅತಿಕ್ರಮಣವಾಗಿದೆ. ಸುಪ್ರೀಂ ಕೋರ್ಟ್‌ನ ಆದೇಶದ ವಿರುದ್ಧವಾಗಿ ದೇವಸ್ಥಾನಗಳನ್ನು ನೆಲಸಮಗೊಳಿಸಲಾಗಿದೆ. ಎಲ್ಲ ಅರ್ಚಕರು ಮಂದಿರಗಳ ರಕ್ಷಣೆಗೆ ಮುಂದಾಗಬೇಕು’ ಎಂದು ಕರೆ ನೀಡಿದರು.

ಮಾದಿಗೊಂಡನಹಳ್ಳಿ ಗುಡ್ಡದ ರಂಗನಾಥ ಸ್ವಾಮಿ ದೇವಸ್ಥಾನದ ವಿಶ್ವಸ್ಥ ಮಂಜುನಾಥ್, ‘ದೇವಸ್ಥಾನಗಳಿಂದ ಆದಾಯ ಪಡೆಯುವ ಸರ್ಕಾರ ಅದೇ ದೇಗುಲಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸುವುದಿಲ್ಲ. ದೇವಸ್ಥಾನಗಳ ಸರ್ಕಾರೀಕರಣ ತಡೆಯಬೇಕು. ಧರ್ಮ ಶಿಕ್ಷಣ ಕೊಟ್ಟು ಹಿಂದೂ ಸಂಸ್ಕೃತಿ ಕಾಪಾಡಬೇಕಾಗಿದೆ. ಎಲ್ಲರು ಸಂಘಟಿತರಾದರೆ ಮಾತ್ರ ನಮ್ಮ ದೇವಸ್ಥಾನ ಉಳಿಸಲು ಸಾಧ್ಯ’ ಎಂದು ತಿಳಿಸಿದರು.

ಪರಿಷತ್ತಿನಲ್ಲಿ ಜಿಲ್ಲೆಯ 100ಕ್ಕೂ ಹೆಚ್ಚು ದೇವಸ್ಥಾನಗಳಲ್ಲಿ ವಸ್ತು ಸಂಹಿತೆ ಜಾರಿಗೊಳಿಸುವುದು, ದೇವಸ್ಥಾನಗಳಲ್ಲಿ ಧರ್ಮ ಶಿಕ್ಷಣ ಪ್ರಾರಂಭಿಸುವುದು, ದೇಗುಲಗಳ ಜೀರ್ಣೋದ್ಧಾರಕ್ಕೆ ಕ್ರಮಕೈಗೊಳ್ಳುವಂತೆ ಸರ್ಕಾರದ ಮೇಲೆ ಒತ್ತಡ ತರುವುದು ಸೇರಿದಂತೆ ಇತರೆ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ನಗರದ ವಾಸವಿ ಕನ್ನಿಕ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಎಲ್‌.ರಮೇಶ್‌ಬಾಬು, ಅಯ್ಯಪ್ಪ ಸೇವಾ ಸಮಿತಿಯ ಖಜಾಂಚಿ ಮೋಹನ್‌ಕುಮಾರ್, ಹಿಂದೂ ಜನಜಾಗೃತಿ ಸಮಿತಿಯ ಶರತ್‌ಕುಮಾರ್‌ ಮೊದಲಾದವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT