ಶುಕ್ರವಾರ, ಅಕ್ಟೋಬರ್ 23, 2020
21 °C
ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್‌ ಹೇಳಿಕೆ

ಗೌಡರ ಗೆಲುವಿಗೆ ಮೈತ್ರಿ ಪಕ್ಷಗಳ ಮಹಿಳಾ ಘಟಕಗಳ ಸಂಕಲ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ‘ಎಚ್‌.ಡಿ.ದೇವೇಗೌಡ ಅವರು ಸುಮಾರು 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಮಹಿಳಾ ಪದಾಧಿಕಾರಿಗಳು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ’ ಎಂದು ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ರುದ್ರೇಶ್‌ ಹೇಳಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತುಮಕೂರು ಲೋಕಸಭಾ ವ್ಯಾಪ್ತಿಯ ಎಲ್ಲ ತಾಲ್ಲೂಕುಗಳಲ್ಲಿ ಈಗಾಗಲೇ ಸಭೆ ಮಾಡಿದ್ದು, ಎಲ್ಲರ ಧ್ಯೇಯ ದೇವೇಗೌಡ ಅವರನ್ನು ಗೆಲ್ಲಿಸುವುದೇ ಆಗಿದೆ ಎಂದರು.

ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ಈಗಾಗಲೇ ನೀಡಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಮಹಿಳೆಯರಿಗೆ ಎಲ್ಲ ರಂಗದಲ್ಲೂ ಪ್ರತ್ಯೇಕ ಮೀಸಲಾತಿ ನೀಡಬೇಕೆಂದು ಮನವಿ ಮಾಡಲಾಗುವುದು ಎಂದು ಹೇಳಿದರು.

‘ದೇವೇಗೌಡ ಅವರು ಬರಿ ಜಿಲ್ಲೆಗೆ ಸೀಮಿತವಾಗಿಲ್ಲ, ರಾಜ್ಯ, ದೇಶದ ಪ್ರಮುಖರಲ್ಲಿ ಒಬ್ಬರಾಗಿದ್ದು, ಅವರ ಗೆಲುವು ಬಹುಮುಖ್ಯವಾಗಿದೆ. ಮಹಿಳೆಯರ ಮೇಲೆ ಅಪಾರ ಗೌರವ ಹೊಂದಿರುವ ಅವರು ಮಹಿಳೆಯರಿಗೆ ಪ್ರತ್ಯೇಕ ಸ್ಥಾನಮಾನ ನೀಡಿದ್ದಾರೆ’ ಎಂದು ತಿಳಿಸಿದರು.

ಜೆಡಿಎಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಹಿಂದುಳಿದ ವರ್ಗದ ರಾಜ್ಯ ಘಟಕದ ಕಾರ್ಯದರ್ಶಿ ನಾಗಮಣಿ, ನೇತ್ರಾವತಿ, ಕವಿತಾ ಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು