ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಬ್ಬಿ: ಬಾವಿಗೆ ಬಿದ್ದಿದ್ದ ಜಿಂಕೆ ರಕ್ಷಣೆ

Published 29 ಮೇ 2024, 6:44 IST
Last Updated 29 ಮೇ 2024, 6:44 IST
ಅಕ್ಷರ ಗಾತ್ರ

ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಬೆಣಚಿಗೆರೆ ಗ್ರಾಮದಲ್ಲಿ ನಾಲ್ಕು ವರ್ಷದ ಗಂಡು ಜಿಂಕೆ ತೋಟದ ಬಾವಿಯಲ್ಲಿ ಪತ್ತೆಯಾಗಿದೆ.

ತೋಟದ ಮಾಲೀಕ ರೇಣುಕಯ್ಯ ಮಂಗಳವಾರ ಬೆಳಿಗ್ಗೆ ತೋಟಕ್ಕೆ ಹೋದ ಸಂದರ್ಭದಲ್ಲಿ ಬಾವಿಯಲ್ಲಿ ಜಿಂಕೆಯನ್ನು ಕಂಡು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಿಳಿಸಿದ್ದಾರೆ. ಬಾವಿಯಲ್ಲಿ ನೀರು ಇಲ್ಲದೆ ಕಾರಣ ಸಣ್ಣಪುಟ್ಟ ಗಾಯಗಳಾಗಿದ್ದ ಜಿಂಕೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಮೇಲೆತ್ತಿದ್ದಾರೆ.

ಜಿಂಕೆಯನ್ನು ಬಾವಿಯಿಂದ ಮೇಲೆತ್ತಲು ತುರ್ತುಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿಂಕೆಯನ್ನು ತಾಲ್ಲೂಕಿನ ಮಂಚಲದೊರೆ ಆರಣ್ಯವಲಯ ಪ್ರದೇಶಕ್ಕೆ ಬಿಡಲಾಗಿದೆ.

ಆಹಾರ ಅರಸಿ ಬಂದ ಜಿಂಕೆಮರಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿರುವ ಸಾಧ್ಯತೆ ಇದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಭಾಗದಲ್ಲಿ ಜಿಂಕೆಗಳು ಇಲ್ಲದಿದ್ದರೂ ಬಾವಿಯಲ್ಲಿ ಜಿಂಕೆ ಹೇಗೆ ಬಿದ್ದಿತು ಎಂಬುದೇ ತಿಳಿಯುತ್ತಿಲ್ಲ. ಉದ್ದೇಶಪೂರ್ವಕವಾಗಿಯೇ ಕೆಲವು ಕಿಡಿಗೇಡಿಗಳು ಜಿಂಕೆಯನ್ನು ಎಲ್ಲಿಂದಲೋ ತಂದು ಬಾವಿಗೆ ಹಾಕಿರುವ ಗುಮಾನಿ ಇದೆ ಎಂದು ಸಾರ್ವಜನಿಕರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT