ಶುಕ್ರವಾರ, ಏಪ್ರಿಲ್ 16, 2021
28 °C

ಮಧುಗಿರಿ: ಗಣಿಗಾರಿಕೆಗೆ ನಿಷೇಧಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ತಾಲ್ಲೂಕಿನ ವೀರಣ್ಣನಹಳ್ಳಿ ಸಮೀಪ ಕಲ್ಲು ಗಣಿಗಾರಿಕೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ, ಗ್ರಾಮಸ್ಥರು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

ತಾಲ್ಲೂಕಿನ ಕಸಬಾ ವ್ಯಾಪ್ತಿಯ ವೀರಣ್ಣನಹಳ್ಳಿ ಗ್ರಾಮದ ಸರ್ವೆ ನಂಬರ್ 25ರಲ್ಲಿ ಅಲಂಕಾರಿಕ ಶಿಲೆ ಗಣಿಗಾರಿಕೆಗೆ ಅವಕಾಶ ನೀಡಬಾರದು  ಎಂದು ಕನಕಪುರದ ಶಿವಮ್ಮ‌, ರಾಜೇಶ್ ಹಾಗೂ ರಮೇಶ್ ‘ತಲಾ 10 ಎಕರೆ ಮಂಜೂರು ಮಾಡಿಕೊಡಬೇಕು ಎಂದು ಅರ್ಜಿ ಹಾಕಿದ್ದಾರೆ. ಆದರೆ ಕಂದಾಯ ನಿರೀಕ್ಷಕ ಹಾಗೂ ಗ್ರಾಮ ಲೆಕ್ಕಿಗರು ಗ್ರಾಮದ ಮಹಜರ್‌ಗೆ ನಕಲಿ ಸಹಿಗಳನ್ನು ನಮೂದಿಸಿ ಗಣಿಗಾರಿಕೆಗೆ ಅವಕಾಶ ನೀಡಬಹುದು ಎಂದು ವರದಿ ನೀಡಿದ್ದಾರೆ. ಈ ಭಾಗದಲ್ಲಿ ಹಲವಾರು ವರ್ಷಗಳಿಂದ ಭೂಮಿಯನ್ನು ನಂಬಿಕೊಂಡು ಜಾನುವಾರುಗಳನ್ನು ಕಟ್ಟಿಕೊಂಡು ಜೀವ ನಡೆಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕಲ್ಲು ಗಣಿಗಾರಿಕೆ ಅವಕಾಶ ನೀಡಬಾರದು’ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಮಾತನಾಡಿ, ಈ ವರದಿಯನ್ನು ಪರಿಶೀಲನೆ ಹಾಗೂ ಸ್ಥಳ ವೀಕ್ಷಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಮುಖಂಡರಾದ ಬಿ.ಎಸ್.ಶ್ರೀನಿವಾಸ್, ಗೋಪಾಲ್, ಗುಂಡನಾಯ್ಕ್, ಗೌರಮ್ಮ, ರಾಜನಾಯ್ಕ್, ಕೃಷ್ಣ ನಾಯ್ಕ್, ಸತೀಶ್ ನಾಯ್ಕ್, ನಾಗಮ್ಮ, ಸುಬ್ಬರಾಯ, ರಾಮಕ್ಕ ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.