ತುಮಕೂರು: ಮಾದಿಗ ಸಮುದಾಯ 1989ರಿಂದ ಅವಕಾಶದಿಂದ ವಂಚಿತವಾಗಿದ್ದು, ಈ ಬಾರಿಯಾದರೂ ವಿಧಾನ ಪರಿಷತ್ ಸದಸ್ಯ ಸ್ಥಾನ ನೀಡುವಂತೆ ಕಾಂಗ್ರೆಸ್ ಮುಖಂಡ ಹೆತ್ತೇನಹಳ್ಳಿ ಮಂಜುನಾಥ್ ಒತ್ತಾಯಿಸಿದ್ದಾರೆ.

‘ಜಿಲ್ಲೆಯಲ್ಲಿ ಎರಡು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಿದ್ದು, ಎಡಗೈ ಸಮುದಾಯಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಸಚಿವರಾದ ಜಿ.ಪರಮೇಶ್ವರ, ಕೆ.ಎನ್.ರಾಜಣ್ಣ ಸಹೋದರ ನಿಷ್ಠೆ ತೋರಿಸಬೇಕು. ಸಮುದಾಯದ ನಾಯಕರಿಗೆ ಅವಕಾಶ ಕಲ್ಪಿಸಬೇಕು’ ಎಂದು ಆಗ್ರಹಿಸಿದ್ದಾರೆ.

ತುಮುಲ್ ಅಧ್ಯಕ್ಷ ಸ್ಥಾನ, ವಿ.ವಿ ಸಿಂಡಿಕೇಟ್ ಸದಸ್ಯ ಸ್ಥಾನ, ಒಂದು ಅಭಿವೃದ್ಧಿ ನಿಗಮಕ್ಕೂ ಮಾದಿಗ ಸಮುದಾಯದ ಮುಖಂಡರನ್ನು ನೇಮಕ ಮಾಡಿಲ್ಲ. ಕೋಮುವಾದಿ ಶಕ್ತಿಗಳನ್ನು ಮಣಿಸುವ ಅನಿವಾರ್ಯತೆಯಿಂದ ಮಾದಿಗರು ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಎಂಎಲ್ಸಿ, ಟೂಡ ಅಧ್ಯಕ್ಷ ಸ್ಥಾನವನ್ನು ಸಮುದಾಯಕ್ಕೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ರಾಜಕೀಯ ಪ್ರಾತಿನಿಧ್ಯದ ವಿಷಯದಲ್ಲಿ ಮಾದಿಗರನ್ನು ಕಡೆಗಣಿಸಲಾಗಿದೆ. ಇದರಿಂದ ಎಡಗೈ ಸಮುದಾಯದ ನಾಯಕತ್ವ ಕ್ಷೀಣಿಸುತ್ತಿದೆ. ಹೀಗೆ ನಿರ್ಲಕ್ಷಿಸಿದರೆ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.