ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕುಣಿಗಲ್: ಲಿಂಕ್ ಕೆನಾಲ್ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

Published 6 ಜುಲೈ 2024, 14:11 IST
Last Updated 6 ಜುಲೈ 2024, 14:11 IST
ಅಕ್ಷರ ಗಾತ್ರ

ಕುಣಿಗಲ್: ತಾಲ್ಲೂಕಿನ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿರುವ ಲಿಂಕ್ ಕೆನಾಲ್ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿ ತಾಲ್ಲೂಕಿನ ಅಮೃತೂರು ಮತ್ತು ಎಡೆಯೂರು ಹೋಬಳಿ ಕಾಂಗ್ರೆಸ್ ಮುಂಖಡರು ಶನಿವಾರ ತಾಲ್ಲೂಕು ಕಚೇರಿ ಮುಂದೆ ಸಭೆ ನಡೆಸಿ ತಹಶೀಲ್ದಾರ್ ವಿಶ್ವನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಭೆಯಲ್ಲಿ ಮಾತನಾಡಿದ ಮುಖಂಡರು, ಹೇಮಾವತಿ ನೀರಿನ ವಿಚಾರದಲ್ಲಿ ಕುಣಿಗಲ್ ತಾಲ್ಲೂಕಿಗೆ ಕಳೆದ 25 ವರ್ಷಗಳಿಂದ ಅನ್ಯಾಯವಾಗಿದೆ. ತಾಲ್ಲೂಕಿಗೆ 3 ಟಿ.ಎಂಸಿ ನೀರು ಹಂಚಿಕೆಯಾಗಿದ್ದರೂ ಇದುವರೆಗೂ ನೀರು ಪಡೆದುಕೊಳ್ಳಲು ಸಾಧ್ಯವಾಗದ ಕಾರಣ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಸಂಸದ ಡಿ.ಕೆ.ಸುರೇಶ್ ಮತ್ತು ಶಾಸಕ ಡಾ.ರಂಗನಾಥ್ ಅವರ ಶ್ರಮದಿಂದಾಗಿ ಲಿಂಕ್ ಕೆನಾಲ್ ₹1000 ಕೋಟಿ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿ ಕಾಮಗಾರಿ ಪ್ರಾರಮಭವಾಗುತ್ತಿರುವ ಸಮಯದಲ್ಲಿ ಪಕ್ಕದ ತಾಲ್ಲೂಕಿನ ಜನಪ್ರತಿನಿಧಿಗಳು ಸೇರಿದಂತೆ ಮುಖಂಡರು ಅಡ್ಡಿಪಡಿಸುತ್ತಿದ್ದಾರೆ. ಗೃಹ ಸಚಿವರು ಪೊಲೀಸ್ ರಕ್ಷಣೆಯಲ್ಲಿ ಕಾಮಗಾರಿ ಪ್ರಾರಂಭ ಮಾಡಲು ಆದೇಶ ನೀಡಿದ್ದರೂ ಕಾಮಗಾರಿಗೆ ಅಡಚಣೆಯಾಗುತ್ತಿದೆ. ಸರ್ಕಾರ ಗಮನಹರಿಸಿ ಕಾಮಗಾರಿ ಪೂರ್ಣಗೊಳಿಸಲು ಮನವಿ ಮಾಡಿದರು.

ಮುಖಂಡರಾದ ಬೆನವಾರ ಶೇಷಣ್ಣ, ಯತಿರಾಜು, ಮಾಸ್ತಿಕರಿಗೌಡ, ಗೊವಿಂದಯ್ಯ, ಲಕ್ಮಣ, ಪುಟ್ಟೆಗೌಡ ಪಡುವಗೆರೆ ಪಂಚಾಯಿತಿ ಅಧ್ಯಕ್ಷ ಜಯರಾಮಯ್ಯ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT