ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ತುಮಕೂರು: ಮುನಿರತ್ನ ಉಚ್ಚಾಟನೆಗೆ ಆಗ್ರಹ

Published : 22 ಸೆಪ್ಟೆಂಬರ್ 2024, 6:19 IST
Last Updated : 22 ಸೆಪ್ಟೆಂಬರ್ 2024, 6:19 IST
ಫಾಲೋ ಮಾಡಿ
Comments

ತುಮಕೂರು: ಮಹಿಳೆ ಮೇಲೆ ಅತ್ಯಾಚಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡ ಆರೋಪ ಎದುರಿಸುತ್ತಿರುವ ಶಾಸಕ ಮುನಿರತ್ನ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ವೈ.ಎಚ್.ಹುಚ್ಚಯ್ಯ ಒತ್ತಾಯಿಸಿದ್ದಾರೆ.

ಏಡ್ಸ್‌ನಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಹನಿಟ್ರ್ಯಾಪ್‌ಗೆ ಬಳಸಿಕೊಂಡು ವಿಕೃತಿ ಮೆರೆದಿದ್ದಾರೆ. ಇಂತಹವರು ಪಕ್ಷದಲ್ಲಿ ಇರಬಾರದು. ಅತ್ಯಾಚಾರಿ, ಭ್ರಷ್ಟಾಚಾರಿಗಳನ್ನು ಪಕ್ಷದಿಂದ ಹೊರಗೆ ಹಾಕಬೇಕು. ಪಕ್ಷಕ್ಕೆ, ಸಮಾಜಕ್ಕೆ ಅಗೌರವ ತಂದಿರುವ ಕಳೆಗಳನ್ನು ಕಿತ್ತು ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಮುನಿರತ್ನ ಮಾಡಿರುವ ತಪ್ಪನ್ನು ಬಿಜೆಪಿ ನಾಯಕರು ಖಂಡಿಸಿ, ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಪಕ್ಷದಲ್ಲಿ ನೈತಿಕತೆ ಎಂಬುದು ಇರುವುದಿಲ್ಲ. ಹೆಣ್ಣು ಮಕ್ಕಳು ಗೌರವಯುತವಾಗಿ ಕೆಲಸ ಮಾಡುವುದು ಕಷ್ಟಕರವಾಗುತ್ತದೆ. ಪಕ್ಷಕ್ಕೆ ಮೆತ್ತಿಕೊಂಡಿರುವ ಕಳಂತ ತೊಳೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಜನಪ್ರತಿನಿಧಿಯಾಗಿ ಪರಿಶಿಷ್ಟ ಜಾತಿಯವರು, ಒಕ್ಕಲಿಗ ಸಮುದಾಯವನ್ನು ನಿಂದಿಸಿದ್ದಾರೆ. ಮಾನವ ಕುಲಕ್ಕೆ ಅಪಮಾನ ಮಾಡಿದ್ದಾರೆ. ಯಾವುದೇ ವ್ಯಕ್ತಿ, ಜಾತಿ, ಧರ್ಮಕ್ಕೆ ಅಪಮಾನ ಮಾಡಬಾರದು. ಮುನಿರತ್ನ ನೈತಿಕ ಪ್ರಜ್ಞೆ ಇಲ್ಲದಂತೆ ನಡೆದುಕೊಂಡಿದ್ದಾರೆ. ಶಿಸ್ತು ಕ್ರಮ ಕೈಗೊಂಡು ಸಮಾಜಕ್ಕೆ ಒಂದು ಉತ್ತಮ ಸಂದೇಶ ರವಾನಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT