ಭಾನುವಾರ, ಏಪ್ರಿಲ್ 18, 2021
24 °C

ತುಮಕೂರು: ತೈಲ ಬೆಲೆ ಇಳಿಕೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಸುತ್ತಿರುವುದನ್ನು ವಿರೋಧಿಸಿ ಜಯಕರ್ನಾಟಕ ಜನಪರ ವೇದಿಕೆ ನೇತೃತ್ವದಲ್ಲಿ ಕಾರ್ಯಕರ್ತರು ನಗರದಲ್ಲಿ ಬುಧವಾರ ಜಟಕಾ ಬಂಡಿಯಲ್ಲಿ ಮೆರವಣಿಗೆ ನಡೆಸಿ ಪ್ರತಿಭಟಿಸಿದರು. ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ಕೊರೊನಾ ಆರ್ಥಿಕ ಸಂಕಷ್ಟದ ನಡುವೆ ಕೇಂದ್ರ ಸರ್ಕಾರ ಇಂಧನ ಬೆಲೆಯನ್ನು ನಿರಂತರವಾಗಿ ಏರಿಕೆಮಾಡಿ ಜನರ ಬದುಕಿಗೆ ಕೊಳ್ಳಿಯಿಟ್ಟಿದೆ. ತೈಲಬೆಲೆ ಏರಿಕೆಯಿಂದಾಗಿ ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿ ಜನಸಾಮಾನ್ಯರ ಬದುಕು ದುಸ್ತರವಾಗುತ್ತಿದೆ. ತಕ್ಷಣ ತೈಲಬೆಲೆ ಇಳಿಸಬೇಕು ಎಂದು ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಉಮಾಶಂಕರ್ ಆಗ್ರಹಿಸಿದರು.

ಅಂತರರಾಷ್ಟ್ರೀಯ ಮಟ್ಟದಲ್ಲಿ ಖಚ್ಚಾ ತೈಲದ ಬೆಲೆ ಕಡಿಮೆ ಇದ್ದರೂ ದೇಶದಲ್ಲಿ ನಿರಂತರವಾಗಿ ಇಂಧನ ಬೆಲೆ ಹೆಚ್ಚಳ ಮಾಡಲಾಗುತ್ತಿದೆ. ಇದರಿಂದ ಬಡವರು, ಮಧ್ಯಮ ವರ್ಗದ ಜನರು ಬದುಕುವುದು ಕಷ್ಟಕರವಾಗಿದೆ ಎಂದರು.

ವೇದಿಕೆ ಮುಖಂಡರಾದ ಜಯ ಪ್ರಕಾಶ್, ಎಸ್.ವಿ.ಗೀತಾ, ಮಂಜುನಾಥ್, ಮಕ್ದುಂ, ಗಿರೀಶ್, ಪ್ರವೀಣ್ ಸಿಂದೆ, ಶ್ರೀಧರ್, ಇಮ್ರಾನ್, ಕೆ.ಪಿ.ರಾಘವೇಂದ್ರ, ವೆಂಕಿ, ಮಧುಸೂಧನ್, ಮಹಮ್ಮದ್ ಯೂನಸ್, ನಾಗೇಂದ್ರಪ್ಪ, ಸಚ್ಚಿನ್, ಶಿಲ್ಪ, ಶೊಹಿಬ್ ಉದ್ದೀನ್, ಷರೀಫ್, ಟಿ.ಎಸ್.ಬಾಲಾಜಿ, ನಯಾಜ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.